More

    ಭದ್ರಾ,ಅನುದಾನ ಬಿಡುಗಡೆಗೆ ಒತ್ತಾಯಿಸಿ ಕೇಂದ್ರ ಸಚಿವರಿಗೆ ಮನವಿ

    ಚಿತ್ರದುರ್ಗ: ಭದ್ರಾಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ 5300 ಕೋಟಿ ರೂ.ಅನುದಾನ ಬಿಡುಗಡೆಗೆ ಒತ್ತಾಯಿಸಿ ನೀರಾ ವರಿ ಅನುಷ್ಠಾನ ಹೋರಾಟ ಸಮಿತಿ ಪ್ರಮುಖರು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಒತ್ತಾಯಿಸಿದರು.
    ನಗರದಲ್ಲಿ ಸೋಮವಾರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ,ಯೋ ಜನೆ ಮಂದಗತಿಯಲ್ಲಿ ಸಾಗಿರುವುದು ರೈತರಲ್ಲಿ ಕಳವಳ ಮೂಡಿಸಿದೆ. ರಾಜ್ಯಸರ್ಕಾರದ ಉದಾಸೀನತೆ,ಕೇಂದ್ರದಾತು ಈಡೇರದೆ ಜಿಲ್ಲೆ ರೈತರನ್ನು ನಿರಾಸೆಗೆ ದೂಡಿದೆ.
    ಕಳೆದ ವಿಧಾನಸಭೆ ಚುನಾವಣೆ ವೇಳೆ ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು,‘ಭದ್ರಾ’ವನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ, 5300 ಕೋಟಿ ರೂ.ಅನುದಾನ ಒದಗಿಸುವುದಾಗಿ ಹೇಳಿದ್ದರು. ಆದರೆ ಒಂದೆಡೆ ಅನುದಾನ ಬಿಡುಗಡೆ ಆಗದಿರು ವುದು, ಮತ್ತೊಂದೆಡೆ ಕಾಮಗಾರಿ ಮಂದಗತಿಯಲ್ಲಿ ಸಾಗಿರುವುದು, ಜನಪ್ರತಿಧಿಗಳ,ಅಧಿಕಾರಿಗಳೆಡೆ ಜನರಲ್ಲಿ ಅಸಮಾಧಾನ ಮೂಡಿ ಸಿದೆ.
    ಓಖ್ಗಅಐಆಅಡಿ ಅನುದಾನ ಒದಗಿಸುವ ಪ್ರಸ್ತಾವನೆ ಕೇಂದ್ರದ ಮುಂದಿದೆ. ಈ ಸಂಬಂಧ ತಾವು(ನಾರಾಯಣಸ್ವಾಮಿ)2023 ಜುಲೈ 3ರಂದು ಕೇಂದ್ರ ಜಲಶಕ್ತಿ ಸಚಿವರಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಪತ್ರ ಬರೆದಿದ್ದೀರಿ ಎಂದು ಸಚಿವರಿಗೆ ತಿಳಿಸಿದ ಲಿಂಗಾ ರೆಡ್ಡಿ, ರೈತರ ತಾಳ್ಮೆಯನ್ನು ಪರೀಕ್ಷಿಸದೆ ಕೇಂದ್ರ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡ ಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರ ಗೊಳಿಸುವುದಾಗಿ ಹೇಳಿದರು.
    ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್,ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ,ಚಿಕ್ಕಪ್ಪನಹಳ್ಳಿ ರುದ್ರ ಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ಮುದ್ದಾಪುರ ನಾಗರಾಜ್,ಶಿವಕುಮಾರ್‌ಬ್ಯಾಡರಹಳ್ಳಿ,ಹಂಪಯ್ಯನಮಾಳಿಗೆ ಧನಂಜಯ,ಚಿಕ್ಕಪ್ಪನಹಳ್ಳಿ ಷಣ್ಮುಖ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts