More

    ಭಾರತೀಯರಿಗೆ ವಿಶೇಷ ದಿನ

     ಚಿಕ್ಕಮಗಳೂರು: ಭಾರತದ ಪ್ರಜಾಪ್ರಭುತ್ವದ ಹಿರಿಮೆಯನ್ನು ಎತ್ತಿ ಹಿಡಿಯುವ ಈ ಸುದಿನ ಭಾರತೀಯರಾದ ನಮ್ಮೆಲ್ಲರಿಗೂ ವಿಶೇಷವಾಗಿದ್ದು, ನಮ್ಮ ತಾಯ್ನಾಡು ಗಣರಾಜ್ಯವಾಗಿ ರೂಪಿತಗೊಂಡ ದಿನ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದರು. ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

    ದೇಶದ ಪ್ರಜೆಗಳನ್ನಾಳುವ ಶಾಸಕಾಂಗ, ನ್ಯಾಯ ನೀಡುವ ನ್ಯಾಯಾಂಗ, ಕರ್ತವ್ಯ ನಿರ್ವಹಿಸುವ ಕಾರ್ಯಾಂಗಗಳಿಗೆ, ನೀತಿ, ನಿಯಮ, ಸಮನ್ವತೆಯ ರೀತಿ ರಿವಾಜುಗಳನ್ನು ಲಿಖಿತ ರೂಪದಲ್ಲಿ ಒಪ್ಪಿ ಪ್ರಜೆಗಳು ತಮಗೆ ತಾವೇ ಪ್ರಭುಗಳು ಎಂದು ಸಾರಿದ ಪವಿತ್ರ ದಿನ. ಇಂದು ನ್ಮಮ ಭಾರತ, ವಿಶ್ವದಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹಿರಿಮೆ ಪಡೆದಿದೆ. ಈ ಪ್ರಜಾಪ್ರಭುತ್ವದ ಮೂಲ ಆಧಾರ ನಮ್ಮ ದೇಶದ ಸಂವಿಧಾನ.

    ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾದ ಡಾ. ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ತಜ್ಞರು, ಸದಸದರು 2 ವರ್ಷ 11 ತಿಂಗಳು, 17 ದಿನಗಳ ಕಾಲ ಶ್ರಮಿಸಿ ಸಿದ್ಧಪಡಿಸಿದ ಸಂವಿಧಾನ ನಮ್ಮದು. ಅಂಬೇಡ್ಕರ್ ಅವರು ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿ ಹಲವು ದೇಶಗಳ ಸಂವಿಧಾನ ಅಧ್ಯಯನ ಮಾಡಿ ಭಾರತೀಯತೆಯನ್ನು ಒಳಗೊಂಡ ನಮ್ಮದೇ ಆದ ಸಂವಿಧಾನ ರಚಿಸಿ ದೇಶಕ್ಕೆ ಸಮರ್ಪಿಸಿದ್ದು ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುತ್ತೇವೆ ಎಂದರು.

    ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆೋಗೌಡ, ರಾಜ್ಯ ಸಫಾಯಿ ಕರ್ವಚಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ.ಪಿ.ವೆಂಕಟೇಶ್, ನಗರಸಭಾ ಅಧ್ಯಕ್ಷ ವರಸಿದ್ದಿವೇಣುಗೋಪಾಲ್, ಸಿಡಿಎ ಅಧ್ಯಕ್ಷ ಸಿ.ಆನಂದ್, ಜಿಪಂ ಸಿಇಓ ಜಿ.ಪ್ರಭು, ಎಸ್ಪಿ ಉಮಾ ಪ್ರಶಾಂತ್, ಉಪ ವಿಭಾಗಾಧಿಕಾರಿ ರಾಜೇಶ್, ತಹಸೀಲ್ದಾರ್ ವಿನಾಯಕ್ ಸಾಗರ್, ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ.ಕ್ರಾಂತಿ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಡಾ.ರಮೇಶ್, ಜಿಲ್ಲಾ ಕ್ರೀಡಾಧಿಕಾರಿ ಮಂಜುಳಾ ಹುಲ್ಲಳ್ಳಿ ಇದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts