More

    ಭಾರತ್ ಬಂದ್​ಗೆ ಮಿಶ್ರ ಪ್ರತಿಕ್ರಿಯೆ

    ಹಾವೇರಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಮಂಗಳವಾರ ವಿವಿಧ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್​ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

    ರೈತ ಸಂಘಟನೆಯ ಮುಖಂಡರು ವಾಹನದಲ್ಲಿ ನಗರದ ವಿವಿಧೆಡೆ ಸಂಚರಿಸಿ ಅಂಗಡಿಗಳನ್ನು ಬಂದ್ ಮಾಡುವಂತೆ ಬೆಳಗ್ಗೆ 11ರ ಸುಮಾರು ಧ್ವನಿವರ್ಧಕ ಮೂಲಕ ಸೂಚಿಸಿದರು. ಕೆಲವರು ಅಂಗಡಿಗಳನ್ನು ಬಂದ್ ಮಾಡಿದಂತೆ ಮಾಡಿ ವಾಹನ ಹೋದ ಕೂಡಲೆ ಮರಳಿ ತೆಗೆದರು. ಮಧ್ಯಾಹ್ನ 12ರ ನಂತರ ಸಿದ್ದಪ್ಪ ಹೊಸಮನಿ ವೃತ್ತದಲ್ಲಿ ವಿವಿಧ ರೈತ ಸಂಘಟನೆಗಳು, ಕಾಂಗ್ರೆಸ್, ಎಸ್​ಎಫ್​ಐ, ಜಿಲ್ಲಾ ನ್ಯಾಯವಾದಿಗಳ ಸಂಘ ಸೇರಿ ಅನೇಕರು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು.

    ಶಿಗ್ಗಾಂವಿ ತಾಲೂಕು ಬಂಕಾಪುರ ಟೋಲ್ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತ ಸಂಘಟನೆಯಿಂದ ವಾಹನ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಲಾಯಿತು. ಆಗ ಪೊಲೀಸರು ರೈತರನ್ನು ಬಂಧಿಸಿ ಬಿಡುಗಡೆಗೊಳಿಸಿದರು. ಸರ್ಕಾರಿ ಕಚೇರಿಗಳು, ಬಸ್ ಆಟೋ ಸಂಚಾರ ಎಂದಿನಂತಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts