More

    ಭಾರತ ಹಾಲು ಉತ್ಪಾದನೆಯಲ್ಲಿ ವಿಶ್ವಕ್ಕೆ ಪ್ರಥಮ

    ಚಿತ್ರದುರ್ಗ: ಭಾರತ ಹೈನುಗಾರಿಕೆಯಲ್ಲಿ ಗಣನೀಯ ಪ್ರಮಾಣದಲ್ಲಿ ಪ್ರಗತಿ ಸಾಧಿಸಿದ್ದು, ಹಾಲು ಉತ್ಪಾದನೆಯಲ್ಲಿ ವಿಶ್ವಕ್ಕೆ ಪ್ರಥಮ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಕೆಎಂಎಫ್ ನಿರ್ದೇಶಕ ವೀರಭದ್ರಬಾಬು ಹೇಳಿದರು.

    ಹೊಸದುರ್ಗ ಎಪಿಎಂಸಿ ಆವರಣದ ರೈತ ಭವನದಲ್ಲಿ ಸಹಕಾರ ಇಲಾಖೆ, ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್‌ನಿಂದ ಬುಧವಾರ ಹೊಸದುರ್ಗ, ಹೊಳಲ್ಕೆರೆ ತಾಲೂಕುಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಹೈನು ಉದ್ಯಮ ಹೆಚ್ಚಿನ ಪ್ರಗತಿ ಸಾಧಿಸಲು ಹಾಲು ಉತ್ಕೃಷ್ಟ ಗುಣಮಟ್ಟ ಹೊಂದಿರಬೇಕು. ಈ ನಿಟ್ಟಿನಲ್ಲಿ ಹೆಚ್ಚು ಗಮನಹರಿಸಬೇಕು ಎಂದು ಸಲಹೆ ನೀಡಿದರು.

    ಯೂನಿಯನ್ ನಿರ್ದೇಶಕ ಜಿಂಕಲ್ ಬಸವರಾಜ್ ಮಾತನಾಡಿ, ತರಬೇತಿ ವೇಳೆ ಸಿಗುವ ಉಪಯುಕ್ತ ಮಾಹಿತಿ ಪಡೆದುಕೊಂಡು ಸಂಘಗಳ ಬೆಳವಣಿಗೆಗೆ ಶ್ರಮಿಸಬೇಕು. ಪ್ರಾಮಾಣಿಕ ಪ್ರಯತ್ನಕ್ಕೆ ಖಂಡಿತ ಫಲ ಸಿಗಲಿದೆ ಎಂದರು.

    ಶಿವಮೊಗ್ಗ ಹಾಲು ಒಕ್ಕೂಟ ನಿರ್ದೇಶಕ ಜಿ.ಪಿ.ಯಶವಂತರಾಜ್ ಮಾತನಾಡಿ, ಚಿತ್ರದುರ್ಗ, ಹೊಸದುರ್ಗ ತಾಲೂಕುಗಳಲ್ಲಿ ಹಾಲು ಉತ್ಪಾದನೆ ಪ್ರಮಾಣ ಜಾಸ್ತಿ ಇದೆ. ನಮ್ಮ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

    ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಮಾತನಾಡಿ, ರಾಜ್ಯ ಹಾಲು ಉತ್ಪಾದನೆ ಮೂಲಕ 24 ಸಾವಿರ ಕೋಟಿ ರೂ. ವಹಿವಾಟು ನಡೆಸಿದೆ. ಶೇ 13.5 ಉತ್ಪಾದನೆ ಹೆಚ್ಚಳವಾಗಿದೆ ಎಂದರು.

    ಯೂನಿಯನ್ ನಿರ್ದೇಶಕ ಜಿ.ಈ.ಅಜ್ಜಪ್ಪ, ಸಿಇಒ ನಾಗರಾಜ್ ಪಾಟೀಲ್, ಶಿವಮೊಗ್ಗ ಹಾಲು ಒಕ್ಕೂಟ ನಿರ್ದೇಶಕಿ ಭಾಗ್ಯಾ ಕಾಂತರಾಜ್, ಮಾತೃಶ್ರೀ ಎನ್.ಮಂಜುನಾಥ್, ಶಿಮುಲ್ ನಿವೃತ್ತ ಸಹಾಯಕ ವ್ಯವಸ್ಥಾಪಕರಾದ ಶೇಖರಪ್ಪ, ಶಿವಾನಂದಪ್ಪ, ಉಪ ವ್ಯವಸ್ಥಾಪಕ ಕೆ.ಪಿ.ಸಂಜಯ್, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ ಸಹಾಯಕ ನಿರ್ದೇಶಕ ಪಿ.ಅಂಜನಮೂರ್ತಿ, ಹೊಸದುರ್ಗ ವಿಭಾಗ ವ್ಯವಸ್ಥಾಪಕ ತಿಪ್ಪೇಸ್ವಾಮಿ, ವಿಸ್ತರಣಾಧಿಕಾರಿಗಳಾದ ಕೃಷ್ಣಪ್ಪ, ರಂಜಿತಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts