More

    ಭಾಷೆ ಉಳಿವಿಗೆ ಬೇಕು ಒಗ್ಗಟ್ಟು -ರಾಮೇಗೌಡ ಆಶಯ

    ದಾವಣಗೆರೆ: ಕನ್ನಡಿಗರು ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧಿಸಬಹುದು. ಎಲ್ಲರೂ ಕನ್ನಡವನ್ನು ಪ್ರೀತಿಸುವ ಮೂಲಕ ಭಾಷೆ ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಹೇಳಿದರು.
    ಚನ್ನಗಿರಿ ತಾಲೂಕಿನ ನವಿಲೇಹಾಳ್‌ನಲ್ಲಿ ಕರವೇ ಗ್ರಾಮ ಶಾಖೆಯಿಂದ ಹಮ್ಮಿಕೊಂಡಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಪುನೀತ್ ರಾಜಕುಮಾರ್ ಅವರ 2 ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ನಗರ ಪ್ರದೇಶದಲ್ಲಿ ಆಂಗ್ಲ ಭಾಷಾ ವ್ಯಾಮೋಹಕ್ಕೆ ಸಿಲುಕಿ ಕನ್ನಡ ಕಡೆಗಣಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಕನ್ನಡದ ವಾತಾವರಣ ಕಾಣಲು ಸಾಧ್ಯ. ರಾಜ್ಯದಲ್ಲಿ ನೆಲೆಸಿದ ಅನ್ಯ ಭಾಷಿಕರು ಕನ್ನಡ ಕಲಿಯುವುದು ಅನಿವಾರ್ಯ. ಕರವೇ ಕನ್ನಡ ಕಲಿಕೆಗೆ ಸಹಕಾರ ನೀಡಲಿದೆ ಎಂದು ತಿಳಿಸಿದರು.
    ಸಾವಿರಾರು ವರ್ಷಗಳ ಇತಿಹಾಸವುಳ್ಳ ಕನ್ನಡ ಭಾಷೆ 8 ಜ್ಞಾನಪೀಠ ಪ್ರಶಸ್ತಿ ಪಡೆದಿದೆ. ನಮ್ಮ ಮಕ್ಕಳಿಗೆ ಮಮ್ಮಿ, ಡ್ಯಾಡಿ ಸಂಸ್ಕೃತಿ ಕೈ ಬಿಟ್ಟು ಅಪ್ಪ-ಅಮ್ಮ ಸಂಸ್ಕಾರ ನೀಡಬೇಕಾಗಿದೆ ಎಂದರು.
    ನಿವೃತ್ತ ಪ್ರಾಧ್ಯಾಪಕ ಡಾ.ಎ.ಬಿ. ರಾಮಚಂದ್ರಪ್ಪ ಮಾತನಾಡಿ, ನವಿಲೇಹಾಳು ಗ್ರಾಮವು ಭಾವೈಕ್ಯದ ನೆಲ. ಇಲ್ಲಿ ವಿಭಿನ್ನ ಕನ್ನಡ ಭಾಷೆ ಮಾತನಾಡುವುದನ್ನು ಕಾಣಬಹುದು. ಇಂಥ ಊರಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವುದು ಅರ್ಥಪೂರ್ಣ ಎಂದು ಬಣ್ಣಿಸಿದರು.
    ಕೆ. ಮಹೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಕರವೇ ಮಹಿಳಾ ಘಟಕ ಅಧ್ಯಕ್ಷೆ ಬಸಮ್ಮ, ಎಂ.ಡಿ. ರಫೀಕ್, ಬಿ.ಜಿ. ವೀರೇಶ್, ಜಾಕೀರ್ ಹುಸೇನ್, ಶ್ರೀನಾಥ್. ಎನ್. ಬಾಬು, ಚಂದ್ರಪ್ಪ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts