More

    ಭಾಷೆ ವಿಷಯದಲ್ಲಿ ಪ್ರತಿಯೊಬ್ಬರಲ್ಲೂ ಜಾಗೃತಿ ಅವಶ್ಯ


    ಯಾದಗಿರಿ: ರಾಜ್ಯದ ನೆಲ,ಜಲ ಹಾಗೂ ಭಾಷೆ ವಿಷಯಕ್ಕೆ ಧಕ್ಕೆ ಬಂದ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗ ಹೋರಾಟಕ್ಕಿಳಿಯುವ ಮನೋಭಾವನೆ ಬೆಳಸಿಕೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.


    ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಿದ್ದ ನೂತನ ಶಾಸಕ, ಸಚಿವರಿಗೆ ಅಭಿನಂದನೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತೀಹೆಚ್ಚು ಅಂಕ ಪಡೆದ ವಿದ್ಯಾಥರ್ಿಗಳಿಗೆ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆಯ ವಿಷಯದಲ್ಲಿ ನಾಡಿನ ಪ್ರತಿಯೊಬ್ಬರೂ ಜಾಗೃತರಾಗಬೇಕಿದೆ ಎಂದರು.


    ಈ ನಿಟ್ಟಿನಲ್ಲಿ ಸಾಕಷ್ಟು ಕನ್ನಡಪರ ಸಂಘಟನೆಗಳು ಕಾಯರ್ೋನ್ನುಖವಾಗಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ನೂರಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾಥರ್ಿಗಳನ್ನು ಇಲ್ಲಿ ಸತ್ಕರಿಸುವ ಮೂಲಕ ಜಿಲ್ಲಾ ಕಸಾಪ ಪ್ರೋತ್ಸಾಹ ನೀಡಿದ್ದು ಅತ್ಯಂತ ಶ್ಲಾಘನೀಯ. ಸಿದ್ದಪ್ಪ ಹೊಟ್ಟಿ ನೇತೃತ್ವದಲ್ಲಿ ಸಾಹಿತ್ಯ ಪರಿಷತ್ತು ಕ್ರಿಯಾಶೀಲವಾಗಿ ತನ್ನ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿದೆ ಎಂದು ಬಣ್ಣಿಸಿದರು.


    ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಸಕರ್ಾರಿ ಶಾಲೆಗಳಲ್ಲಿ ಅಭ್ಯಾಸ ಮಾಡಿ ಇಂದು ಕನ್ನಡ ಭಾಷೆಯಲ್ಲಿ 100ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾಥರ್ಿಗಳಿಗೆ ಸಾಹಿತ್ಯ ಪರಿಷತ್ತು ಅಭಿನಂದಿಸುವ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಇದರ ಜತೆಗೆ ನೂತನವಾಗಿ ಆಯ್ಕೆಯಾದ ಜಿಲ್ಲೆಯ ಶಾಸಕರಿಗೂ ಕೂಡಾ ಸನ್ಮಾನಿಸುವ ಮೂಲಕ ನಮ್ಮ ಜವಾಬ್ದಾರಿ ಹೆಚ್ಚಿಸಿದ್ದಾರೆ ಎಂದರು.


    ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ, ಯಾದಗಿರಿ ಜಿಲ್ಲೆಯಾದ ನಂತರ ನಮ್ಮ ಸಾಹಿತ್ಯ ಪರಿಷತ್ತು 10 ಹಲವು ಕಾರ್ಯಕ್ರಮ ಆಯೋಜಿಸುವ ಮೂಲಕ ಗಡಿ ಭಾಗದಲ್ಲಿ ಕನ್ನಡ ಭಾಷೆಯ ಜಾಗೃತಿಗಾಗಿ ಶ್ರಮಿಸಿದೆ. ಜಿಲ್ಲಾ ಮತ್ತು ತಾಲೂಕು ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ಸಂಘಟಿಸಲಾಗಿದೆ ಎಂದು ವಿವರಿಸಿದರು.


    ಪ್ರಾಚಾರ್ಯ ಪ್ರೋ.ಸುಭಾಶ್ಚಂದ್ರ ಕೌಲಗಿ ಪ್ರಾಸ್ತಾವಿಕ ಮಾತನಾಡಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಈ ಅವಯಲ್ಲಿ ಯಾದಗಿರಿ ಜಿಲ್ಲೆಗೆ ಅವಕಾಶ ಕೊಡಲಾಗುವುದು ಎಂದು ಅಧ್ಯಕ್ಷ ಡಾ.ಮಹೇಶ ಜೋಶಿ ಭರವಸೆ ನೀಡಿದ್ದಾರೆ. ಹೀಗಾಗಿ ಸಚಿವರು ಮತ್ತು ಶಾಸಕ ಪರಿಷತ್ತಿಗೆ ಆನೆಬಲವಾಗಿ ನಿಲ್ಲಬೇಕಿದೆ ಎಂದು ಮನವಿ ಮಾಡಿದರು.


    ಇದೇ ವೇಳೆ ಕನ್ನಡ ಭಾಷೆಯಲ್ಲಿ ಅತೀಹೆಚ್ಚು ಅಂಕ ಪಡೆದ ಸುಮಾರು 100ಕ್ಕೂ ಹೆಚ್ಚು ವಿದ್ಯಾಥರ್ಿಗಳಿಗೆ ಸತ್ಕರಿಸಲಾಯಿತು.
    ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ್, ಅಯ್ಯಣ್ಣಾ ಹುಂಡೇಕಾರ, ಆರ್.ಮಹಾದೇವಪ್ಪ ಅಬ್ಬೆತುಮಕೂರ, ಬಸವರಾಜ ಮೋಟ್ನಳ್ಳಿ, ಡಾ.ಸಿದ್ದರಾಜ ರಡ್ಡಿ, ದೇವರಾಜ ಬಳಿಚಕ್ರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts