More

    ಭೂಸುಧಾರಣೆ ಕಾಯ್ದೆ ತಿದ್ದುಪಡಿ ಕೈಬಿಡಲು ಮನವಿ

    ಸಿದ್ದಾಪುರ: ರಾಜ್ಯ ಸರ್ಕಾರ ತರಲು ಉದ್ದೇಶಿಸಿರುವ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಆರ್.ನಾಯ್ಕ ಹಾಗೂ ಪದಾಧಿಕಾರಿಗಳು ತಹಸೀಲ್ದಾರ್ ಮಂಜುಳಾ ಎಸ್.ಭಜಂತ್ರಿ ಅವರ ಮೂಲಕ ರಾಜ್ಯಪಾಲರಿಗೆ ಗುರುವಾರ ಮನವಿ ಸಲ್ಲಿಸಿದರು.

    ಈ ಕಾಯ್ದೆ ತಿದ್ದುಪಡಿಯಿಂದ ಸಣ್ಣ ಹಾಗೂ ಅತಿ ಸಣ್ಣ ರೈತರ ಪಾಲಿಗೆ ತೊಂದರೆ ಆಗಲಿದೆ. ಉದ್ದೇಶಿತ ಕಾಯ್ದೆ ತಿದ್ದುಪಡಿ ಆದರೆ ಕಾರ್ಪೆರೇಟ್ ವಲಯದವರಿಗೆ ಹಾಗೂ ಕಪ್ಪು ಹಣ ಹೊಂದಿದವರಿಗೆ ಸುವರ್ಣ ಯುಗ ಆರಂಭವಾಗುತ್ತದೆ. ದೇವರಾಜ ಅರಸು ಅವರು ಭೂಸುಧಾರಣಾ ಕಾಯ್ದೆ ಜಾರಿ ಮಾಡಿ ರೈತರು ಗೌರವಯುತವಾಗಿ ಜೀವನ ನಡೆಸುವಂತೆ ಮಾಡಿದ್ದಾರೆ. ಆದರೆ, ಇಂದಿನ ಸರ್ಕಾರ ಆ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಶಕ್ತಿಗುಂದುವಂತೆ ಮಾಡಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

    ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ಕೆ.ನಾಯ್ಕ ಕಡಕೇರಿ, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಸತೀಶ ಹೆಗಡೆ, ಕಾರ್ಯದರ್ಶಿ ಎನ್.ಟಿ.ನಾಯ್ಕ, ಅಶೋಕ ನಾಯ್ಕ, ವಿ.ಟಿ.ಗೌಡ, ಶ್ರೀಧರ ಕೊಂಡ್ಲಿ, ರಾಘವೇಂದ್ರ ಪೂಜಾರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts