More

    ಭೂ ವಿಜ್ಞಾನಿ ಪ್ರವೀಣ ವಿರುದ್ಧ ಕ್ರಮಕ್ಕೆ ಆಗ್ರಹ

    ಬೆಳಗಾವಿ: ತಾಲೂಕಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭೂ ವಿಜ್ಞಾನಿ ಪ್ರವೀಣಕುಮಾರ ಬಿ.ಕೆ. ಅಕ್ರಮ ಗಣಿಗಾರಿಕೆ ನಡೆಸುವವರ ಜತೆ ಸೇರಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ಹಾನಿ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಅಂಬೇವಾಡಿ ಗ್ರಾಪಂ ಪದಾಧಿಕಾರಿಗಳು, ಗ್ರಾಮಸ್ಥರು ಗುರುವಾರ ಸಚಿವ ಮುರುಗೇಶ ನಿರಾಣಿ ಅವರಿಗೆ ಮನವಿ ಸಲ್ಲಿಸಿದರು. ಕಾನೂನು ವಿರುದ್ಧ ಗಣಿಗಾರಿಕೆ ಚಟುವಟಿಕೆ ನಡೆಸಲು ತಿಂಗಳ ಹಪ್ತಾ ಕೊಡಲು ಕರಾರು ಮಾಡಿಕೊಂಡಿದ್ದಾರೆ. ಅಂಬೇವಾಡಿ ಗ್ರಾಪಂ ವ್ಯಾಪ್ತಿಯಲ್ಲಿ 20 ಕಲ್ಲು ಗಣಿ ಗುತ್ತಿಗೆಗಳಲ್ಲಿ ಕಾನೂನು ಬಾಹಿರ ಗಣಿಗಾರಿಕೆ ಮತ್ತು ಸಾಗಣೆ ನಡೆದರೂ ಕ್ರಮ ಜರುಗಿಸಿಲ್ಲ. ಈ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಬಾಕ್ಸೈಟ್ ಅದಿರಿನ ಅಕ್ರಮ ದಂಧೆ ನಡೆಯುತ್ತಿದ್ದು, ಅದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಚೇತನ ಪಾಟೀಲ, ಶಿವಾನಂದ ಜಂಗಮ, ನೀಲಪ್ಪ ಪೂಜಾರಿ, ಯಲ್ಲಪ್ಪ ಹೊನಗೇಕರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts