More

    ಭೂ ಸ್ವಾಧೀನ ಕಾಯ್ದೆ ಹಿಂಪಡೆಯಿರಿ

    ಶಿಕಾರಿಪುರ: ಭೂಸ್ವಾಧೀನ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ವಿರುದ್ಧ ರೈತ ಸಂಘದ ಸದಸ್ಯರು ಪಟ್ಟಣದ ಕಿರಣ್ ಟಾಕೀಸ್ ಸರ್ಕಲ್​ನಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

    ಸಂಘದ ಅಧ್ಯಕ್ಷ ಶಿವಮೂರ್ತೆಪ್ಪ ಬಣಕಾರ್ ಮಾತನಾಡಿ, ಸರ್ಕಾರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮೂಲಕ ರೈತರ ಮರಣ ಶಾಸನ ಬರೆಯುತ್ತಿದೆ. ಬ್ರಿಟಿಷ್ ಕಾಲದಲ್ಲಿ ಈಸ್ಟ್ ಇಂಡಿಯಾ ಕಂಪನಿ ಮಾತ್ರ ಇತ್ತು. ಆದರೆ ಈಗ ಸರ್ಕಾರದ ಭೂಸ್ವಾಧೀನ ತಿದ್ದುಪಡಿ ಕಾಯ್ದೆ ಅನುಷ್ಠಾನದಿಂದ ಹಳ್ಳಿಹಳ್ಳಿಗಳಲ್ಲಿ ಈಸ್ಟ್ ಇಂಡಿಯಾ ಕಂಪನಿಗಳು ಹುಟ್ಟಿದರೂ ಆಶ್ಚರ್ಯಪಡಬೇಕಿಲ್ಲ ಎಂದರು.

    ಬಹುರಾಷ್ಟ್ರೀಯ ಕಂಪನಿಗಳ ಹಿತಕಾಯಲು ಕಾಯ್ದೆ ಜಾರಿ ಮಾಡಲಾಗುತ್ತಿದೆ. ಇದರಿಂದ ಸಣ್ಣ, ಅತಿ ಸಣ್ಣ ರೈತರು ಭೂ ರಹಿತರಾಗುವ ಅಪಾಯವಿದೆ. ಕೂಡಲೇ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಸರ್ಕಾರ ಜಾರಿಗೊಳಿಸಿರುವ ಶಾಸನದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆದಿದೆ. ಇದು ಮತ್ತಷ್ಟು ಉಗ್ರಸ್ವರೂಪ ತಾಳುವ ಮೊದಲು ಸರ್ಕಾರ ಹಿಂಪಡೆಯಬೇಕು. ರೈತರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದು ಈಗ ರೈತರ ಕತ್ತು ಹಿಸುಕುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಎಚ್ಚರಿಸಿದರು.

    ಗೌರವಾಧ್ಯಕ್ಷ ಕೆ.ಪರಮೇಶ್ವರಪ್ಪ, ಜಿಲ್ಲಾ ಕಾರ್ಯದರ್ಶಿ ಕವಲಿ ಬಲೀಂದ್ರಪ್ಪ, ಉಪಾಧ್ಯಕ್ಷರಾದ ಮಂಜಪ್ಪ, ಬಾಬಣ್ಣ, ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ, ರೈತ ನಾಯಕರಾದ ಡಿ.ಎಸ್.ಈಶ್ವರಪ್ಪ, ಅರುಣ್​ಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts