More

    ಭ್ರೂಣಹತ್ಯೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ – ಎಐಎಂಎಸ್‌ಎಸ್‌ ಮನವಿ ಸಲ್ಲಿಕೆ 

    ದಾವಣಗೆರೆ: ಮಂಡ್ಯ, ಮೈಸೂರು ಮತ್ತು ಬೆಂಗಳೂರು ಭಾಗದಲ್ಲಿ ಹೆಣ್ಣು ಭ್ರೂಣಹತ್ಯೆಯಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾದ ತಪ್ಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈ ಜಾಲವನ್ನು ಭೇದಿಸಿ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವಂತೆ ಎಐಎಂಎಸ್‌ಎಸ್‌ನ ಜಿಲ್ಲಾ ಘಟಕ ಆಗ್ರಹಿಸಿದೆ.
    ಸಂಘಟನೆ ಕಾರ್ಯಕರ್ತರು ಮಂಗಳವಾರ ಈ ಸಂಬಂಧ, ದಾವಣಗೆರೆ ಉಪವಿಭಾಗಾಧಿಕಾರಿ ದುರ್ಗಾಶ್ರೀ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ಸಲ್ಲಿಸಿದರು.
    ದೇಶ ಸ್ವಾತಂತ್ರ್ಯ ಗಳಿಸಿ 76 ವರ್ಷ ಕಳೆದರೂ ಸಮಾಜದಲ್ಲಿ ಮೌಢ್ಯ ನೆಲೆಸಿದೆ ಎಂಬುದಕ್ಕೆ ಕೆಲವು ನಗರಗಳಲ್ಲಿ ಕಳೆದೆರಡು ವರ್ಷದಲ್ಲಿ ನಡೆದಿರುವ 900ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಸಾಕ್ಷಿಯಾಗಿವೆ.
    ಘಟನೆಗೆ ಸಂಬಂಧಿಸಿದಂತೆ ವೈದ್ಯರು, ನರ್ಸ್ ಸೇರಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಆರೋಗ್ಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವಹಿಸಿದೆ, ಆದರೆ ತ್ವರಿತವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದರು.
    ಲಿಂಗ ಪತ್ತೆ ಮತ್ತು ಸ್ತ್ರೀ ಭ್ರೂಣ ಹತ್ಯೆ ನಿಷೇಧ ಕಾನೂನಿದ್ದರೂ ಆಡಳಿತ ವರ್ಗದ ನಿರ್ಲಕ್ಷೃ ಧೋರಣೆ, ಜನರ ಮನಸ್ಥಿತಿ ಬದಲಾಗಿಲ್ಲ. ಹೆಣ್ಣು- ಗಂಡು ಇಬ್ಬರೂ ಸರಿಸಮಾನರು ಎಂದು ಜಾಗೃತಿ ಮೂಡಿಸುವ ಕೆಲಸ ಇಂದು ತುರ್ತು ಆಗಬೇಕಿದೆ ಎಂದು ಪ್ರತಿಭಟನಾಕಾರರು ಆಶಿಸಿದರು.
    ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಿಷೇಧ ಕಾನೂನನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಬೇಕು. ಲಿಂಗ ಸಮಾನತೆ ಮನೋಭಾವ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕೆ. ಭಾರತಿ, ಜಿಲ್ಲಾ ಸಮಿತಿ ಸದಸ್ಯೆ ಮಮತಾ, ವೈಷ್ಣವಿ ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts