More

    ಮಕ್ಕಳನ್ನು ದುಡಿಸಿಕೊಂಡರೆ ಶಿಕ್ಷಾರ್ಹ ಅಪರಾಧ


    ಯಾದಗಿರಿ: ಸರಕಾರ ಇತ್ತೀಚಿನ ದಿನಗಳಲ್ಲಿ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಗಂಭೀರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರತಿ ಮಗು ಕಡ್ಡಾಯವಾಗಿ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ನಿಯಮವಿದ್ದು, ಪಾಲಕರು ಈ ಬಗ್ಗೆ ಗಮನ ಹರಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಹೊನಾಲೆ ತಿಳಿಸಿದರು.

    ನಗರದ ತಹಸೀಲ್ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಪಾನ್ ಇಂಡಿಯಾ ಅಭಿಯಾನದಡಿ ಬಾಲ ಕಾರ್ಮಿಕ ಮಕ್ಕಳ ಪುನರ್ವಸತಿ ಮತ್ತು ರಕ್ಷಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿಷೇಧಿಸಲು 1986 ತಿದ್ದುಪಡಿ ಕಾಯ್ದೆ 2016ರನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆ ಅನ್ವಯ ಎಲ್ಲ ಉದ್ದಿಮೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ಅಪರಾಧವಾಗಿದೆ ಎಂದು ತಿಳಿಸಿದರು.

    ತಹಸೀಲ್ದಾರ್ ಸುರೇಶ ಅಂಕಲಗಿ ಮಾತನಾಡಿ, ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂಥ ಅಂಗಡಿ ಮಾಲೀಕರ ವಿರುದ್ಧ 20ರಿಂದ 50 ಸಾವಿರ ರೂ.ವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು. ಹೀಗಾಗಿ ಸಾರ್ವಜನಿಕರು ಈ ಬಗ್ಗೆ ತಿಳಿವಳಿಕೆ ಮೂಡಿಸಿಕೊಳ್ಳಬೇಕಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts