More

    ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ

    ಗುಂಡ್ಲುಪೇಟೆ: ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಎಲ್ಲ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಮನವಿ ಮಾಡಿದರು.


    ತಾಲೂಕಿನ ಚಿಕ್ಕಾಟಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬುಧವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.


    ಸರ್ಕಾರ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಉಚಿತ ಸಮವಸ್ತ್ರ, ಪಠ್ಯಪುಸ್ತಕ, ನೋಟ್‌ಬುಕ್, ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ.


    ಹೆಚ್ಚಿನ ಅಂಕಗಳಿಸಿದ ಪ್ರತಿಭಾವಂತರನ್ನು ಮಾತ್ರ ಸರ್ಕಾರಿ ಶಾಲೆಗಳಿಗೆ ಶಿಕ್ಷಕರನ್ನಾಗಿ ಆಯ್ಕೆ ಮಾಡಲಾಗುತ್ತಿದ್ದು, ಇದರಿಂದ ಈ ಶಾಲೆಗಳಲ್ಲಿ ಮಾತ್ರ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಅದರೆ ಖಾಸಗಿ ಶಾಲೆಗಳ ಆಡಂಬರಗಳಿಗೆ ಮನಸೋಲುವ ಪಾಲಕರು ದುಬಾರಿ ಶುಲ್ಕ ತೆತ್ತು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳು ಹಾಗೂ ಕಾನ್ವೆಂಟ್‌ಗಳಿಗೆ ಕಳುಹಿಸುತ್ತಿದ್ದಾರೆ. ಆದ್ದರಿಂದ ಇನ್ನಾದರೂ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.


    ಬಿಇಒ ರಾಜಶೇಖರ್, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ಮುನಿರಾಜು, ಮುಖಂಡ ಮಹೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts