More

    ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಮುಂದೆ ಬನ್ನಿ

    ಯಾದಗಿರಿ: ಸಮಾಜದಲ್ಲಿನ ಎಲ್ಲ ಸಮಸ್ಯೆಗಳಿಗೆ ಶಿಕ್ಷಣದಿಂದ ಮಾತ್ರ ಪರಿಹಾರ ಸಿಗಲು ಸಾಧ್ಯವಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟರು.

    ತಾಲೂಕಿನ ಮೈಲಾಪುರ ಗ್ರಾಮದಲ್ಲಿ ತಿಂಥಣಿ ಬ್ರಿಡ್ಜ್ನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಆಶ್ರಯದಲ್ಲಿ ನಿರ್ಮಾಸುತ್ತಿರುವ ಹೊನ್ನಕೆರೆ ಮಲ್ಲಯ್ಯ ಹಾಲುಮತ ಪುಣ್ಯಾಶ್ರಮ ಹಾಗೂ ವಸತಿ ಶಾಲೆಯ ಅಡಿಗಲ್ಲು ಸಮಾರಂಭದಲ್ಲಿ ಮಾತನಾಡಿ, ನಮ್ಮ ಸಮಾಜದ ಮಕ್ಕಳಿಗೆ ಮೊದಲು ಉನ್ನತ ಶಿಕ್ಷಣ ಕೊಡಿಸಲು ಪಾಲಕರು ಮುಂದಾಗಬೇಕು ಎಂದು ಸಲಹೆ ನೀಡಿದರು.

    ಮಠ,ಮಾನ್ಯಗಳು ನಾಗರಿಕ ಸಮಾಜ ನಿರ್ಮಾಣಕ್ಕೆ ಸರ್ಕಾರಗಳೂ ಮಾಡದಂಥ ಮಹತ್ವದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಸಾವಿರಾರು ವರ್ಷಗಳ ಧಾಮರ್ಿಕ ಐತಿಹಾಸಿಕ ಹೊಂದಿದ ಮೈಲಾಪುರ ಗ್ರಾಮದಲ್ಲಿ ಶ್ರೀ ಸಿದ್ದರಮಾನಂದಪುರಿ ಸ್ವಾಮಿಗಳು ತ್ರಿವಿಧ ದಾಸೋಹದ ಸಂಕಲ್ಪ ಹೊಂದಿದ್ದಾರೆ. ಇದರಿಂದ ಎಲ್ಲ ವರ್ಗದ ಬಡ ಮಕ್ಕಳಿಗೆ ಹಾಗೂ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಮುಂದಿನ ದಿನಗಳಲ್ಲಿ ಅನುಕೂಲವಾಗಲಿದೆ ಎಂದರು.

    ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಶಾಸಕ ವೆಂಕಟರಡ್ಡಿ ಮುದ್ನಾಳ್, ಮೈಲಾಪುರ ಕ್ಷೇತ್ರಕ್ಕೆ ಉತ್ತಮ ರಸ್ತೆ, ಯಾತ್ರಿ ನಿವಾಸ, ಶುದ್ಧ ಕುಡಿಯುವ ನೀರು ಪೂರೈಸುವ ಜತೆಗೆ ಗ್ರಾಮದ ಎಲ್ಲ ಬಡವಾಣೆಗಳಲ್ಲಿ ಸಿಸಿ ರಸ್ತೆ ನಿಮರ್ಿಸಲಾಗಿದೆ. ಇದುವರೆಗೂ 7 ಕೋಟಿ ರೂ.ಅನುದಾನ ಖಚರ್ು ಮಾಡಲಾಗಿದೆ ಎಂದು ವಿವರಿಸಿದರು.

    ರಾಯಚೂರ ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಇಲ್ಲಿ ಕನಕ ಪೀಠವು ಅಭಿವೃದ್ಧಿಗೆ ಪೂರಕವಾದ ಯೋಜನೆ ಹಾಕಿಕೊಂಡು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ದೃಷ್ಠಿಕೋನ ಹೊಂದಿರುವುದು ಶ್ಲಾಘನೀಯ. ಸಂಸದರ ನಿಯಿಂದ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

    ಸಾನಿಧ್ಯ ವಹಿಸಿ ಮಾತನಾಡಿದ ಶ್ರೀ ಸಿದ್ದರಮಾನಂದಪುರಿ ಸ್ವಾಮಿಗಳು ನಾಡಿನ ಧಾಮರ್ಿಕ ಕ್ಷೇತ್ರಗಳಲ್ಲಿ ಶ್ರೀಮೈಲಾರಲಿಂಗೇಶ್ವರ ದೇವಸ್ಥಾನ ಸಹ ಒಂದಾಗಿದೆ. ಸಕರ್ಾರ ಇಲ್ಲಿ ಮೂಲ ಸೌಕರ್ಯ ಒದಗಿಸುವ ಮೂಲಕ ಪ್ರವಾಸೋಧ್ಯಮ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts