More

    ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ

    ಮಾಲೂರು: ರಾಜ್ಯದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜವು ಸದೃಢವಾಗಿ ಬೆಳೆದು, ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

    ಪಟ್ಟಣದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರಂಗಮಂದಿರದಲ್ಲಿ ಬುಧವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ವಾರ್ಷಿಕೋತ್ಸವ, ಯುವಘಟಕ ಉದ್ಘಾಟನೆ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನೂತನ ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಮಾಜದ ಬಂಧುಗಳಿಗೆ ಹಮ್ಮಿಕೊಂಡಿದ್ದ ಅಭಿನಂಧನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

    ವೀರಶೈವ ಲಿಂಗಾಯತ ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನ ಸ್ಥಾನಮಾನ ನೀಡಲಾಗುತ್ತಿದೆ. ಪಾಲಕರು ಮನೆಯೇ ದೇವಾಲಯವನ್ನಾಗಿ ಮಾಡಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ ಧರ್ಮದ ವಿಚಾರಧಾರೆ, ಆದರ್ಶ ಕಲಿಸಿ ಮಕ್ಕಳು ಸ್ವಾವಲಂಬಿಯಾಗಿ ಬೆಳೆಯುವಂತೆ ಮಾಡಬೇಕು ಎಂದರು.

    ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಮಾತನಾಡಿ, ಯುವಕರು ಉನ್ನತ ಶಿಕ್ಷಣ ಪಡೆದು ಸಮಾಜದ ಮುನ್ನೆಲೆಗೆ ಬರುವ ಜತೆಗೆ ಸುಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

    ಕರ್ನಾಟಕ ಸರ್ಕಾರದ ಗಡಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಮಾತನಾಡಿ, ಮಾಲೂರು, ಬಂಗಾರಪೇಟೆ, ಶ್ರೀನಿವಾಸಪುರ, ಮುಳಬಾಗಿಲು ಗಡಿಪ್ರದೇಶದ ತಾಲೂಕುಗಳಾಗಿ ಗುರುತಿಸಿವೆ. ರಾಜ್ಯಾದ್ಯಂತ 52 ತಾಲೂಕುಗಳನ್ನು ಗುರುತಿಸಿದ್ದು, ಇನ್ನೂ 11 ತಾಲೂಕು ಸೇರುತ್ತಿವೆ. ಗಡಿ ಅಭಿವೃದ್ಧಿ ಪ್ರಾಧಿಕಾರದ ಕೆಲಸ ಗಡಿನಾಡಿನ ಒಳನಾಡಿನ ಮತ್ತು ಹೊರನಾಡು ಕನ್ನಡಿಗರನ್ನು ಒಂದುಗೂಡಿಸಿ ಭಾವನಾತ್ಮಕವಾಗಿ ಬೆಸೆಯುವ ಕೆಲಸ ಮಾಡುತ್ತಿದ್ದೇವೆ. 20 ಜಿಲ್ಲೆಗಳ ಗಡಿನಾಡಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲು ಸಂಕಲ್ಪ ತೊಟ್ಟಿದ್ದು, ಇಂತಹ ಕಾರ್ಯಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

    ಎಸ್ಸೆಸ್ಸೆಲ್ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿಗಮ ಮಂಡಳಿ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.
    ಬೆಳ್ಳಾವಿ ಸಂಸ್ಥಾನ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ, ನಾಗಲಾಪುರ ಸಂಸ್ಥಾನಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ ಅಧ್ಯಕ್ಷ ಶಿವಶಖರಯ್ಯ ಅಧ್ಯಕ್ಷತೆ ವಹಿಸಿದ್ದರು.

    ಸಮಾಜದ ರಾಜ್ಯ ಕಾರ್ಯದರ್ಶಿ ರೇಣುಕಾ ಪ್ರಸನ್ನ, ಯುವ ಘಟಕ ಅಧ್ಯಕ್ಷ ಮನೋಹರ್ ಅಬ್ಬಿಗೆರೆ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಆರಾಧ್ಯ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎನ್.ಆರ್.ಜ್ಞಾನಮೂರ್ತಿ, ಪುರಸಭೆ ಅಧ್ಯಕ್ಷ ಮುರಳೀಧರ್, ಕರ್ನಾಟಕದ ಅರ್ಚಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಷಡಕ್ಷಾರಿ ಶಾಸ್ತ್ರಿ, ವೀರಶೈವ ಸಮಾಜದ ಮುಖಂಡರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts