More

    ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ


    ಯಾದಗಿರಿ: ಸಮಾಜದಲ್ಲಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಶಿಕ್ಷಣ ಸಿಗಬೇಕು ಎಂಬ ಕಾರಣದಿಂದ ಸರಕಾರ ನಾನಾ ಯೋಜನೆ ಜಾರಿಗೆ ತಂದಿದ್ದು ಪಾಲಕರು ಈ ಬಗ್ಗೆ ಜಾಗೃತರಾಗಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಎನ್.ಹೊನಾಲೆ ಸಲಹೆ ನೀಡಿದರು.

    ಮಂಗಳವಾರ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬಾಲ್ಯ, ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ತಿದ್ದುಪಡಿಯ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 14 ರಿಂದ 18 ವರ್ಷದ ಕಿಶೋರ ಕಾಮರ್ಿಕ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಎಸ್.ಕೋಳಿ, ಅಪಾಯಕಾರಿ ಉದ್ದಿಮೆ, ಹೊಟೆಲ್, ಗ್ಯಾರೇಜ್ ಹೀಗೆ ಇನ್ನಿತರ ಕಡೆಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡರೆ ಮಾಲೀಕರ ವಿರುದ್ಧ 20 ರಿಂದ 50 ಸಾವಿರ ರೂ.ವರೆಗೆ ದಂಡ ಮತ್ತು ಗರಿಷ್ಠ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಈ ಕಾಯ್ದೆಯ ಬಗ್ಗೆ ತಿಳಿವಳಿಕೆ ಮೂಡಿಸಿಕೊಳ್ಳಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts