ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಸಿ

PH 06
Published on

ಚಿಂಚೋಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆ ಪಿಎಂ ಪೋಷಣ್ ಯೋಜನೆ ಅನುಷ್ಠಾನಕ್ಕೆ ಮುಖ್ಯಗುರು ಹಾಗೂ ಅಡುಗೆ ಸಹಾಯಕಿಯರು ಪ್ರಾಮಾಣಿಕವಾಗಿ ಶ್ರಮಿಸಬೇಕು. ಮಕ್ಕಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಸರ್ಕಾರಿ ಪದವಿಪೂರ್ವ ಮಹಾವಿದ್ಯಾಯದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೋಷಣ್ ಯೋಜನೆ ಕುರಿತು ಸರ್ಕಾರಿ/ ಅನುದಾನಿತ ಶಾಲೆಗಳ ಬಿಸಿಯೂಟ ಸಿಬ್ಬಂದಿ ಹಾಗೂ ಮುಖ್ಯಗುರುಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರದ ಚಾರ್ಟ್ ಪ್ರಕಾರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಕೆಯಾಗಬೇಕು. ತರಬೇತಿಯ ಮೂಲ ಉದ್ಧೇಶ ಅರಿತು ಸೇವೆ ಸಲ್ಲಿಸಿ. ಲೋಪದೋಷ ಕಂಡುಬAದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಆದರ್ಶ ವಿದ್ಯಾಲಯ, ತಾಲೂಕು ಕ್ರೀಡಾಂಗಣ, ಇಂದಿರಾ ಕ್ಯಾಂಟಿನ್ ಸೇರಿ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದರು. ಸಹಾಯಕ ಆಯುಕ್ತ ಆಶಪ್ಪ ಪೂಜಾರಿ, ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ತಾಪಂ ಇಒ ಶಂಕರ ರಾಠೋಡ್, ಬಿಇಒ ಹಣಮಂತ ರಾಠೋಡ್, ಪುರಸಭೆ ಮುಖ್ಯಾಧಿಕಾರಿ ಕಾಶೀನಾಥ ಧನ್ನಿ, ಪ್ರಮುಖರಾದ ನಾಗಶೆಟ್ಟಿ ಭದ್ರಶೆಟ್ಟಿ, ಕೇಶವ ಕುಲಕರ್ಣಿ, ಜಯಪ್ಪ ಚಾಪಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net