More

    ಮಕ್ಕಳಿಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

    ಬೀದರ್: ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಬಿಆರ್‍ಸಿ ಸಮನ್ವಯಾಧಿಕಾರಿ ವಿಜಯಕುಮಾರ ಬೆಳಮಗಿ ಅಭಿಪ್ರಾಯಪಟ್ಟರು
    ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಇರುವ ಶ್ರೀ ಶಿವಕುಮಾರೇಶ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕುಂಬಾರವಾಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ಶಿಕ್ಷಕರು ಮಕ್ಕಳಲ್ಲಿ ಇರುವ ಸೂಪ್ತ ಪ್ರತಿಭೆಯನ್ನು ಗುರುತಿಸಬೇಕು. ಪ್ರತಿಭಾ ಕಾರಂಜಿಯಲ್ಲಿ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
    ಶಿಕ್ಷಣ ಸಂಯೋಜಕ ಮಹಮ್ಮದ್ ಪಟೇಲ್ ಮಾತನಾಡಿ, ಸೋಲೇ ಗೆಲುವಿನ ಮೆಟ್ಟಿಲು. ಹೀಗಾಗಿ ಮಕ್ಕಳು ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.
    ಮುಖ್ಯಶಿಕ್ಷಕ ಬಸವರಾಜ ಮ್ಯಾಗೇರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ತಾನಾಜಿ, ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ವಲಯ ಸಂಪನ್ಮೂಲ ವ್ಯಕ್ತಿ ಸಿದ್ಧಲಿಂಗಯ್ಯ ಸ್ವಾಮಿ ಇದ್ದರು.
    ಸತೀಶ ಪಾಂಚಾಳ ಸ್ವಾಗತಿಸಿದರು. ನಾಗನಾಥ ಬಿರಾದಾರ ನಿರೂಪಿಸಿದರು. ಪ್ರೀತಿ ವಂದಿಸಿದರು.
    ಸಮೂಹ ನೃತ್ಯ, ಗಾಯನ, ಭಾಷಣ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts