More

    ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಕಲಿಸಿ

    ಚನ್ನರಾಯಪಟ್ಟಣ: ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕೃತಿ, ಮಾನವೀಯ ಮೌಲ್ಯಗಳು, ಗುರು ಹಿರಿಯರಿಗೆ ಗೌರವ ನೀಡುವಂತಹ ಸಂಸ್ಕಾರಗಳನ್ನು ಕಲಿಸುವುದು ಮಹಿಳೆಯರ ಆದ್ಯ ಕರ್ತವ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕುಸುಮಾ ಬಾಲಕೃಷ್ಣ ಅಭಿಪ್ರಾಯಪಟ್ಟರು.

    ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪುರಸಭೆ, ಹೇಮಾವತಿ, ಕಾವೇರಿ, ಹಾಗೂ ಒಳಗೆರಮ್ಮ ಪ್ರದೇಶ ಮಟ್ಟದ ಒಕ್ಕೂಟಗಳ ಸಂಯುಕ್ತ ಆಶಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

    ನಾರಿಯನ್ನು ಪೂಜಿಸಿದರೆ ಅಲ್ಲಿ ದೇವತೆ ನೆಲೆಸಿರುತ್ತಾಳೆ. ಪ್ರಪಂಚದಲ್ಲೇ ನಾರಿಗೆ ಪೂಜ್ಯನೀಯ ಸ್ಥಾನ ನೀಡಿರುವುದು ಭಾರತದಲ್ಲಿ ಮಾತ್ರ. ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿರುವುದು ನಾವೆಲ್ಲ ಹೆಮ್ಮೆಪಡಬೇಕಾದ ವಿಷಯ ಎಂದರು.

    ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ವ್ಯವಸ್ಥಾಪಕಿ ಕೋಮಲಾ ಮಾತನಾಡಿದರು. ಸಾಹಿತಿ ಡಾ. ಕುಸುಮಾ, ಪುರಸಭಾ ಅಧ್ಯಕ್ಷೆ ರೇಖಾ ಅನಿಲ್, ಉಪಾಧ್ಯಕ್ಷ ಲಕ್ಷ್ಮೀವೆಂಕಟೇಶ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬನಶಂಕರಿ ರಘು, ಸದಸ್ಯರಾದ ಸುಜಾತಾ, ಕವಿತಾ ರಾಜು, ಪುರಸಭಾ ಮುಖ್ಯಾಧಿಕಾರಿ ಕೆ.ಎನ್.ಹೇಮಂತ್, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ಅಧಿಕಾರಿ ಡಾ.ರಾಜೇಶ್, ಒಕ್ಕೂಟಗಳ ಅಧ್ಯಕ್ಷರಾದ ಉಮಾ, ನಾಜಿಯಾ, ಛಾಯಾ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts