More

    ಮಕ್ಕಳು ಜೀವನದಲ್ಲಿ ಸದ್ಗುಣ ಮೈಗೂಡಿಸಿಕೊಳ್ಳಿ

    ನಾಪೋಕ್ಲು : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ 23ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಇಲ್ಲಿನ ಕೆ.ಪಿ.ಎಸ್. ಶಾಲಾ ಮೈದಾನದಲ್ಲಿ ಶುಕ್ರವಾರ ಜರುಗಿತು.
    ಕೆಪಿಎಸ್ ಪ್ರಾಂಶುಪಾಲ ಡಾ.ಅವನಿಗೆ ಸೋಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಕುಂಡಿಯೋಳಂಡ ಗಣೇಶ್ ಮುತ್ತಪ್ಪ ಮಾತನಾಡಿ, ಮಕ್ಕಳು ಜೀವನದಲ್ಲಿ ಸದ್ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಯಾಗಿ ರೂಪುಗೊಳ್ಳಬೇಕು ಎಂದರು.
    ಮಹಿಳಾ ಸಮಾಜದ ಅಧ್ಯಕ್ಷ ಕುಂಚೇಟ್ಟಿರ ರೇಷ್ಮಾ ಉತ್ತಪ್ಪ ಮಾತನಾಡಿ, ಇಂತಹ ಶಿಬಿರಗಳು ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ. ಇದರ ಸದುಪಯೋಗ ಪಡೆದುಕೊಂಡು ಅಕಾಡೆಮಿಗೆ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರಬೇಕು ಎಂದು ಹೇಳಿದರು. ಅಕಾಡೆಮಿ ಅಧ್ಯಕ್ಷ ಕಲಿಯಂಡ ಸಾಬು ಅಯ್ಯಯ್ಯಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ವರ್ಷದ ಬೇಸಿಗೆ ಶಿಬಿರದ ತರಬೇತಿಯಲ್ಲಿ 80 ಮಕ್ಕಳು ಭಾಗವಹಿಸಿದ್ದು, ಸುಮಾರು ಒಂದು ತಿಂಗಳು ಕಾಲ ಹಾಕಿ ಸೇರಿದಂತೆ ವಿವಿಧ ತರಬೇತಿಯನ್ನು ನೀಡಲಾಗಿದೆ. ಇದರಿಂದಾಗಿ ಮಕ್ಕಳ ಭವಿಷ್ಯ ಉಜ್ವಲವಾಗಲಿದೆ. ನಮ್ಮಲ್ಲಿ ತರಬೇತಿ ಪಡೆದ ಶಿಬಿರಾರ್ಥಿಗಳು ಉತ್ತಮ ಹುದ್ದೆ ಅಲಂಕರಿಸಿದ್ದು ಅಕಾಡೆಮಿಗೆ ಗೌರವ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ನಿವೃತ್ತ ಪ್ರಾಂಶುಪಾಲ ಕಲ್ಯಾಟಂಡ ಪೂಣಚ್ಚ, ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಭಕ್ತ ಜನಸಂಘದ ಅಧ್ಯಕ್ಷ ಕಾಂಡಂಡ ಜೋಯಪ್ಪ, ಲಯನ್ಸ್ ಜೋನ್ ಚೇರ್ಮನ್ ಮುಕ್ಕಾಟಿರ ವಿನಯ್, ಬಿದ್ದಾಟಂಡ ಮಮತಾ ಚಿನ್ನಪ್ಪ, ಏಳ್ತಂಡ ಸಾಬಾ ಬೋಪಣ್ಣ, ಬಿದ್ದಾಟಂಡ ಜಿನ್ನು ನಾಣಯ್ಯ, ಕೊಂಡಿರ ನಾಣಯ್ಯ, ಖಜಾಂಚಿ ಕುಶು ಮಾಚೇಟಿರ ಕುಶಾಲಪ್ಪ, ತರಬೇತುದಾರರಾದ ಕೇಟೋಳಿರ ಡಾಲಿ ಅಪ್ಪಚ್ಚ, ಅರೆಯಡ ಗಣೇಶ್ ಬೆಳ್ಳಿಯಪ್ಪ, ಚೆಟ್ಟಿಯಾರಂಡ ದಿಲನ್, ಧೀರಜ್ ಇದ್ದರು.
    ಶಿಬಿರಾರ್ಥಿಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳ ಪ್ರದರ್ಶನ ನಡೆಯಿತು. ಬಳಿಕ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts