More

    ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚುಸಲು ಮನವಿ : ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪೋಷಕರ ಸಭೆ

    ಚಾಮರಾಜನಗರ : ಸರ್ಕಾರಿ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಕಲಿಕಾ ಮಟ್ಟವನ್ನು ಹೆಚ್ಚಿಸಬೇಕು. ಜತೆಗೆ, ಶುದ್ಧ ಕುಡಿಯುವ ನೀರು, ಶೌಚಗೃಹ, ಕೊಠಡಿ ಸೇರಿದಂತೆ ಮೂಲಸೌಲಭ್ಯಗಳ ಬಗ್ಗೆ ಗಮನಹರಿಸಬೇಕೆಂದು ಪಾಲಕರು ಮನವಿ ಮಾಡಿದರು.


    ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಪಾಲಕರು, ಮಕ್ಕಳಿಗೆ ಸಮವಸ್ತ್ರ ಹಾಗೂ ನಿತ್ಯ ಕಲಿಕಾ ವಿಷಯಗಳನ್ನು ಡೈರಿ ಮೂಲಕ ಸೂಚನೆ ನೀಡಬೇಕು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷಾ ಕಲಿಕಾ ಮಟ್ಟದಲ್ಲಿ ಹಿಂದುಳಿದು,್ದ ಈ ನಿಟ್ಟಿನಲ್ಲಿ ಶಿಕ್ಷಕ ವರ್ಗ ಎಚ್ಚೆತ್ತುಕೊಳ್ಳಬೇಕು. ಶಾಲಾ ವಾರ್ಷಿಕೋತ್ಸವ, ಕ್ರೀಡಾ ಚಟುವಟಿಕೆಗಳು, ಸಾಂಸ್ಕೃತಿಯ ಕಾರ್ಯಕ್ರಮಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಿಕ್ಷಕರ ಗಮನ ಸೆಳೆದರು.


    ಉಪಪ್ರಾಂಶುಪಾಲ ನಂಜುಂಡಯ್ಯ ಮಾತನಾಡಿ, ಶಾಲೆಯಲ್ಲಿ 1ನೇ ತರಗತಿಯಿಂದ ಪಿಯುಸಿ ಹಾಗೂ ಪದವಿ ತರಗತಿಗಳು ಒಟ್ಟಾಗಿರುವ ಹಿನ್ನೆಲೆಯಲ್ಲಿ ಕೊಠಡಿ ಹಾಗೂ ಶೌಚಗೃಹಗಳ ಸಮಸ್ಯೆಯಾಗುತ್ತಿದೆ. ಕಾಲ ಕಾಲಕ್ಕೆ ಸ್ವಚ್ಛತೆ ಮಾಡಿಸಲಾಗುವುದು. ಪ್ರತ್ಯೇಕ ಕೊಠಡಿ ಕಾರ್ಯನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯದಲ್ಲೇ ಸಮಸ್ಯೆ ದೂರವಾಗಲಿದೆ. ಮಗುವಿನ ಕಲಿಕಾ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.


    ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್, ಪ್ರಾಥಮಿಕ ವಿಭಾಗ ಎಸ್‌ಡಿಎಂಸಿ ಅಧ್ಯಕ್ಷ ರಾಜು, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಪುಟ್ಟಸಿದ್ದಮ್ಮ, ಶಿಕ್ಷಕ ಮಧುರಾಣಿ, ಶ್ರೀಧರ್‌ನಾಯಕ್, ಪ್ರಶಾಂತ್, ನಂಜುಂಡಸ್ವಾಮಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts