More

    ಮಕ್ಕಳ ಪ್ರತಿಭೆ ಅನಾವರಣಕ್ಕೆ ಕಲೋತ್ಸವ ಸಹಕಾರಿ

    ದೊಡ್ಡಕವಲಂದೆ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ಸಿದ್ದರಾಜು ಅಭಿಮತ


    ನಂಜನಗೂಡು: ಪ್ರತಿಯೊಂದು ಮಗುವಿನಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ದೊಡ್ಡಕವಲಂದೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಸಿದ್ದರಾಜು ಹೇಳಿದರು.


    ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ವ್ಯಕ್ತಿತ್ವ ವಿಕಸನ ಸಾಧ್ಯವಿದೆ. ನಮ್ಮ ಭಾಗದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.

    ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣೆ ಮಾಡಲಾಯಿತು.ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರನಾಯಕ, ಎಸ್‌ಡಿಎಂಸಿ ಅಧ್ಯಕ್ಷ ನಜಿಬುಲ್ಲಾಖಾನ್, ಗ್ರಾ.ಪಂ. ಸದಸ್ಯರಾದ ಮಂಜು, ಪ್ರಶಾಂತ್, ನಶರುಲ್ಲಾಖಾನ್, ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲ ರಘು, ಮಧುಶ್ರೀ, ಅರ್ಚನಾ, ರವಿಕುಮಾರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts