More

    ಮಕ್ಕಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ

    ಚಿತ್ರದುರ್ಗ: ಬೇಸಿಗೆ ಶಿಬಿರಗಳು ಮಕ್ಕಳಲ್ಲಿರುವ ಪ್ರತಿಭಾ ಅನಾವರಣಕ್ಕೆ ಹಾಗೂ ಆಟೋಟೊಗಳ ತರಬೇತಿಗೆ ಸೂಕ್ತ ವೇದಿಕೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್.ಬಣಕಾರ್ ಹೇಳಿದರು.

    ರಾಜ್ಯ ಬಾಲಭವನ ಸೊಸೈಟಿ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಬಾಲಭವನದಲ್ಲಿ ಸೋಮವಾರದಿಂದ 29ರವರೆಗೆ ಆಯೋಜಿಸಿರುವ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಬೇಸಿಗೆ ರಜೆಯ ಸದ್ಭಳಕೆಗೆ ಈ ಶಿಬಿರ ನೆರವಾಗುತ್ತದೆ ಎಂದರು.

    ಬಾಲಮಂದಿರಗಳ ಹಾಗೂ ಸರ್ಕಾರಿ ಶಾಲೆ ಮಕ್ಕಳಿಗಾಗಿ ರಜೆ ದಿನಗಳಲ್ಲಿ ಸಂಗೀತ, ನೃತ್ಯ ತರಗತಿಗಳನ್ನು ಆಯೋಜಿಸಲಾಗಿದೆ. ಮಕ್ಕಳು ಮೊಬೈಲ್ ಮತ್ತು ಟಿವಿ ಮುಂದೆ ಕುಳಿತು ಸಮಯ ವ್ಯರ್ಥ ಮಾಡಬಾರದು ಎಂದು ಕಿವಿಮಾತು ಹೇಳಿದರು.

    ಕಲೆ, ಸಾಹಿತ್ಯ, ಸಂಗೀತದಲ್ಲಿನ ಆಸಕ್ತಿ, ಶಿಬಿರಗಳು ಸಮಗ್ರ ಬೆಳವಣಿಗೆಗೆ ಪೂರಕವಾಗಿವೆ. ಪ್ರತಿಭೆ ಅನಾವರಣಕ್ಕೆ ಅಗತ್ಯ ತರಬೇತಿ ನೀಡಲಾಗುತ್ತದೆ. ಸೊಸೈಟಿಯಿಂದ ಬೇಸಿಗೆ ಶಿಬಿರ ಹಾಗೂ ವಾರಾಂತ್ಯ ತರಗತಿ, ರಾಷ್ಟ್ರೀಯ ಹಬ್ಬಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿಕೊಂಡು ಬರಲಾಗಿದೆ ಎಂದರು.

    ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತಾನಾಡಿ, ಶಿಬಿರಗಳು ನಾಯಕತ್ವ ಗುಣ ರೂಢಿಸಿಕೊಳ್ಳಲು, ಉನ್ನತ ಸ್ಥಾನಗಳಿಗೆ ಬೆಳೆಯಲು ಸಹಕಾರಿಯಾಗಿವೆ ಎಂದು ಹೇಳಿದರು.
    ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಗದೀಶ್ ಶಿಬಿರಕ್ಕೆ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಕೆಂಪಹನುಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರಾ, ಸರ್ಕಾರಿ ಬಾಲಕರ ಬಾಲಮಂದಿರ ಅಧೀಕ್ಷಕಿ ಜ್ಯೋತಿ, ಯೋಗ ಶಿಕ್ಷಕ ಎಂ.ತಿಪ್ಪೇಸ್ವಾಮಿ ಕಲಾ ಶಾಲೆ ಸಂಸ್ಥಾಪಕಿ ಭಾರ್ಗವಿ, ಚಿತ್ರಕಲಾ ಶಿಕ್ಷಕಿ ಜಯಶೀಲಾ, ಸಂಪನ್ಮೂಲ ವ್ಯಕ್ತಿ ಕೆ.ಪವಿತ್ರಾ, ಜಿಲ್ಲಾ ಬಾಲಭವನದ ಅಧೀಕ್ಷಕ ರಜಾಕ್ ಸಾಬ್, ಸರ್ಕಾರಿ ಬಾಲಕಿಯರ ಬಾಲ ಮಂದಿರ ಅಧೀಕ್ಷಕಿ ಸುನೀತಾ, ಕಾರ್ಯಕ್ರಮ ಸಂಯೋಜಕ ಡಿ.ಶ್ರೀಕುಮಾರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts