More

    ಮಕ್ಕಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ


    ಹಾಸನ : ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ನಿಂಬೇಹಳ್ಳಿ ಚಂದ್ರು ಸಲಹೆ ನೀಡಿದರು.

    ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಗ್ರಾಮದ ಶಾರದಾ ಅನಿಕೇತನ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರೋತ್ಸಾಹ ಸಾಧನೆಯ ಒಂದು ಮೆಟ್ಟಿಲು. ಮಕ್ಕಳು ದೇವರ ಸಮಾನ. ಅವರ ಮನಸ್ಸಿಗೆ ನೋವಾಗುವಂತಹ ಶಿಕ್ಷೆ ನೀಡದೆ ನಗು ಬೆರೆಸಿ ಪಾಠ ಕಲಿಸಬೇಕು. ಶಿಕ್ಷಣದಲ್ಲಿ ಮಾತೃಭಾಷೆಗೂ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.


    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಎಂ.ರಾಮಚಂದ್ರು ಮಾತನಾಡಿ, ಗ್ರಾಮೀಣ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಸಾಧನೆ ಮಾಡಬೇಕು. ಮಾತೃ ಭಾಷೆಯಲ್ಲಿಯೂ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಪಠ್ಯ ಪುಸ್ತಕಗಳು ಇವೆ. ಶಾಲೆಯಲ್ಲಿ ಸಿಗುವ ಶಿಕ್ಷಣದ ಜತೆಗೆ ಮನೆಯಲ್ಲಿ ಮೌಲ್ಯಯುತ ಸಂಸ್ಕಾರ ಸಿಕ್ಕರೆ ಮಾತ್ರ ಮುಂದಿನ ಭವಿಷ್ಯ ಉಜ್ವಲವಾಗಿರಲು ಸಾಧ್ಯ ಎಂದರು.


    ಈ ವೇಳೆ ವೈದ್ಯಕೀಯ ಶಿಕ್ಷಣ ತರಬೇತಿಗೆ ಪ್ರವೇಶ ಪಡೆದಿರುವ ಎಂ.ಎಸ್.ದೀಪಕ್‌ಗೆ ಆರ್ಥಿಕ ನೆರವು ನೀಡಿ ಅಭಿನಂದಿಸಲಾಯಿತು. ಬಳಿಕ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಮುಖ್ಯಸ್ಥರಾದ ಶ್ಯಾಮಲಾ, ಉದಯಕುಮಾರ್, ಮುಖ್ಯಶಿಕ್ಷಕ ಧರ್ಮರಾಜ್, ಉಪನ್ಯಾಸಕ ಶಶಿಧರ್, ಸಹಶಿಕ್ಷಕರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts