More

    ಮಕ್ಕಳ ರಕ್ಷಣಾ ನೀತಿ ಪರಿಣಾಮಕಾರಿ ಅನುಷ್ಠಾನಕ್ಕೆ ಸಿಇಒ ಸೂಚನೆ

    ಚಿತ್ರದುರ್ಗ: ಮಕ್ಕಳ ಸ್ನೇಹಿ ವಾತಾವರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಹೇಳಿದರು.
    ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬುಧವಾರ ಜಿಪಂದಲ್ಲಿ ರಾಜ್ಯಮಕ್ಕಳ ರಕ್ಷಣಾ ನೀತಿ-2016ರ ಕುರಿತು ಶೈಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ಏರ್ಪಡಿಸಿದ್ದಒಂದು ದಿನದ ತರಬೇತಿ ಕಾ ರ್ಯಾಗಾರದಲ್ಲಿ ಅವರು ಮಾತನಾಡಿದರು.
    ಮಕ್ಕಳ ರಕ್ಷಣೆ ದೃಷ್ಟಿಯಿಂದ ಜಿಲ್ಲೆ ಎಲ್ಲ ಗ್ರಾಪಂ ಕಚೇರಿಗಳಲ್ಲೂ 1098 ಹಾಗೂ 112 ಸಹಾಯವಾಣಿ ಸಂಖ್ಯೆಗಳನ್ನು ಪ್ರಚುರ ಪಡಿಸಲಾಗಿದೆ. ಮಕ್ಕಳ ಗ್ರಾಮ ಸಭೆಗಳಾಗಿವೆ. ಕೃಷಿ ಹೊಂಡ, ಕಲ್ಲು ಕ್ವಾರಿ ಹಾಗೂ ಜಲಮೂಲಗಳ ಬಳಿ ಅವಘಡಗಳಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಶಾ ಲೆಗಳ ಕಟ್ಟಡದ ಮೇಲೆ ವಿದ್ಯುತ್‌ತಂತಿ,ಆವರಣದಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಲಾಗಿದೆ ಎಂದರು.
    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಮಾತನಾಡಿ,ಮಕ್ಕಳ ರಕ್ಷಣೆ ಹಾಗೂ ಬೆಳವಣಿಗೆಗಾಗಿ ಯಾವೆಲ್ಲ ಕ್ರ ಮಗಳನ್ನು ಕೈಗೊಳ್ಳಬೇಕೆಂಬುದರ ಬಗ್ಗೆ ಮಕ್ಕಳರಕ್ಷಣಾ ನೀತಿ-2016ರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದ್ದು, ಈ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದರು.
    ಎಎಸ್‌ಪಿ ಕುಮಾರಸ್ವಾಮಿ ಮಾತನಾಡಿ, ನಮ್ಮ ಜಿಲ್ಲೆ ತುರ್ತು ಸೇವೆ ಒದಗಿಸುವುದರಲ್ಲಿ ರಾಜ್ಯದಲ್ಲಿಯೇ 2ನೇ ಸ್ಥಾನದಲ್ಲಿದೆ. ಸಾರ್ವಜನಿಕರು ತುರ್ತುಸೇವೆಗಾಗಿ 112ಕ್ಕೆ ದೂರವಾಣಿ ಕರೆ ಮಾಡಬಹುದಾಗಿದೆ ಎಂದರು.
    ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಮಕ್ಕಳ ರಕ್ಷಣಾ ನೀತಿ ಪರಿಣಾಮಕಾರಿ ಅನುಷ್ಠಾನಕ್ಕಾಗಿ ತರಬೇತಿ ಏರ್ಪಡಿಸಲಾಗಿದೆ ಎಂದರು. ಕೊಪ್ಪಳ ಜಿಲ್ಲೆ ಯೂನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಕೆ.ರಾಘವೇಂದ್ರ ಭಟ್ಟ ಉಪನ್ಯಾಸ ನೀಡಿದರು.
    ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್.ಪ್ರಭಾಕರ,ಡಿಡಿಪಿಐ ಕೆ.ರವಿಶಂಕರ್‌ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಡಿ.ಕೆ.ಶೀಲಾ,ಜಿ.ಟಿ.ಬಸವರಾಜ್, ಬಾಲನ್ಯಾಯ ಮಂಡಳಿ ಸದಸ್ಯೆ ಸುಮನಾ ಎಸ್ ಅಂಗಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಮತ್ತಿತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts