More

    ಮಕ್ಕಳ ರಕ್ಷಣೆಯಲ್ಲಿ ಸೂಕ್ಷ್ಮತೆ ಇರಲಿ


    ಯಾದಗಿರಿ: ಮುಗ್ಧತೆ ಮನಸ್ಥಿತಿ ಹೊಂದಿರುವ ಮಕ್ಕಳ ಮೇಲಾಗುತ್ತಿರುವ ಶೋಷಣೆ, ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸುರಕ್ಷತೆ ಮತ್ತು ಸೂಕ್ಷ್ಮತೆಯಿಂದ ನಿಯಮಿತ ಕಾಲದಲ್ಲಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದರು.

    ಸೋಮವಾರ ಇಲ್ಲಿನ ಜಿಪಂ ಕಚೇರಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳ ನ್ಯಾಯ ( ಪೋಷಣೆ ಮತ್ತು ರಕ್ಷಣೆ) ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಆರ್ಟಿಇ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಮತ್ತು ಮಕ್ಕಳ ರಕ್ಷಣಾ ನೀತಿ ಕುರಿತ 2 ದಿನದ ತರಬೇತಿ ಚಾಲನೆ ನೀಡಿ ಮಾತನಾಡಿದರು.

    ಸಹಭಾಗಿದಾರ ಇಲಾಖೆಯ ತಳಮಟ್ಟದ ಮತ್ತು ಎಲ್ಲ ಸ್ತರದ ಅಧಿಕಾರಿಗಳು ಮಕ್ಕಳಿಗಾಗಿ ಜಾರಿಯಲ್ಲಿರುವ ಕಾನೂನು ಮತ್ತು ನಿಯಮಗಳ ಪ್ರಕಾರ ಬದ್ದತೆಯಿಂದ ಕೆಲಸ ಮಾಡಬೇಕು. ಪ್ರತಿಯೊಬ್ಬ ಕೆಳಮಟ್ಟದ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಮಾತ್ರ ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಕೆಲವು ದಿನಗಳ ಹಿಂದೆ ವಸತಿ ನಿಲಯ, ಶಾಲೆಗಳಿಗೆ ಭೇಟಿ ನೀಡಿದಾಗ ಕಂಡು ಬಂದ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಲೋಪ ದೋಷಗಳು ಕಂಡುಬಂದರೆ ಅಧಿಕಾರಿಗಳು ಸುಧಾರಿಸಿಕೊಳ್ಳಲು ಗಮನಹರಿಸಬೇಕು ಎಂದು ಹೇಳಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ರವೀಂದ್ರ ಹೊನೊಲೆ, ಜಿಲ್ಲೆಯ ಅಧಿಕಾರಿಗಳು ಸಂವೇದನೆಯಿಂದ ಕಾರ್ಯನಿರ್ವಹಿಸಿ ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ ಮುಂತಾದ ಸೂಕ್ಷ್ಮ ವಿಷಯಗಳನ್ನು ಮನದಟ್ಟು ಮಾಡಿಕೊಂಡು ತುತರ್ು ಕ್ರಮ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಕಾನೂನಿನ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ ಹಾಗೂ ವಿವಿಧ ಭಾಗಿದಾರರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತರಬೇತಿಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಮಕ್ಕಳಿಗಾಗಿ ಇರುವ ಕಾಯ್ದೆಗಳು ತಿಳಿದುಕೊಂಡು, ತಮ್ಮ ದೈನಂದಿನ ಕಾರ್ಯ ವಿಧಾನಗಳಲ್ಲಿ ಅಳವಡಿಸಿಕೊಂಡು ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು. ಬಾಲ್ಯವಿವಾಹ ಇನ್ನಿತರ ಅಪರಾಧಗಳನ್ನು ತಡೆಗಟ್ಟುವುದು ಕೇವಲ ಮಹಿಳಾ ಇಲಾಖೆಗೆ ಮಾತ್ರ ಸಂಬಂಧಿಸಿದ್ದಲ್ಲ, ಎಲ್ಲ ಇಲಾಖೆಗಳು ಜವಾಬ್ದಾರಿಯೂ ಆಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts