More

    ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರಿ ಶಾಲೆ ಪೂರಕ

    • ಕಿಕ್ಕೇರಿ: ಸರ್ಕಾರಿ ಶಾಲೆಗಳು ಎಲ್ಲ ರೀತಿಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಹೇಳಿದರು. ಹೋಬಳಿಯ ಮಾದಾಪುರ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಹಲವು ಪ್ರತಿಭಾನ್ವಿತರನ್ನು ಈ ಶಾಲೆ ನಾಡಿಗೆ ನೀಡಿದೆ. ಇಂತಹ ಶಾಲೆ ಉಳಿಸಿ, ಬೆಳೆಸುವುದು ಎಲ್ಲರ ಕರ್ತವ್ಯ. ಬಡ, ಶ್ರಮಿಕ ವರ್ಗದ ಮಕ್ಕಳಿಗೆ ಅಕ್ಷರ ಜ್ಞಾನ ನೀಡುವ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಎಲ್ಲರೂ ಮುಂದಾಗಿ ಎಂದು ಸಲಹೆ ನೀಡಿದರು. ಶಾಲಾ ಮಕ್ಕಳು ನೃತ್ಯ, ಹಾಡು ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು. ಶುದ್ಧ ಕುಡಿಯುವ ನೀರಿನ ಯಂತ್ರ ನೀಡಿದ ಹಿರಿಯ ವಿದ್ಯಾರ್ಥಿಗಳಾದ ರವಿ, ಅವಿನಾಶ್, ಅಭಿಜಿತ್, ಯುಪಿಎಸ್ ನೀಡಿದ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಮುಖರು, ಶಾಲೆಗೆ ಸುಣ್ಣಬಣ್ಣದ ವ್ಯವಸ್ಥೆ ಮಾಡಿದ ಮಹದೇವು, ಅಮಿತ್ ಇತರರನ್ನು ಗೌರವಿಸಲಾಯಿತು.
      ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ನಂಜುಂಡಯ್ಯ, ಶಿಕ್ಷಕರಾದ ಜ್ಯೋತಿ, ರಾಜಪ್ಪ, ಶೋಭಾ, ಎಸ್‌ಡಿಎಂಸಿ ಅಧ್ಯಕ್ಷ ಸಿ.ಎನ್.ಯೋಗೇಶ್, ಗ್ರಾಪಂ ಅಧ್ಯಕ್ಷೆ ಶೋಭಾ ಕುಮಾರ್, ಮುಖಂಡರಾದ ಎಂ.ಎನ್.ರಾಮಕೃಷ್ಣೇಗೌಡ, ಎಂ.ಕೆ.ಚಂದ್ರಶೇಖರ್, ಎಂ.ಎನ್.ಮಂಜೇಗೌಡ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts