More

    ಮಠಗಳ ಬದಲಿಗೆ ಶೈಕ್ಷಣಿಕ ಉದ್ದೇಶಕ್ಕೆ ಅನುದಾನ ಕೊಡಿ

    ದಾವಣಗೆರೆ:ಶಿಕ್ಷಣಕ್ಕೆ ಮಾನ್ಯತೆ ನೀಡದ ಯಾವುದೇ ಮಠಗಳಿಗೆ ರಾಜ್ಯ ಸರ್ಕಾರ ಅನುದಾನ ನೀಡಬಾರದು ಎಂದು ವಕೀಲ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಆಗ್ರಹಿಸಿದರು.
    ಸರ್ಕಾರ, ಮಠಗಳಿಗೆ ಕೋಟಿಗಟ್ಟಲೆ ಅನುದಾನ ನೀಡಿದರೆ ಆರ್ಥಿಕ ಹೊಡೆತ ಬೀಳಲಿದೆ. ಮಠಗಳಿಗೆ ಕೋಟಿಗಟ್ಟಲೇ ಅನುದಾನ ನೀಡುವ ಆದೇಶ ರದ್ದುಪಡಿಸಬೇಕು. ಇಲ್ಲವಾದಲ್ಲಿ ರಾಜ್ಯದ ಬೊಕ್ಕಸ ಖಾಲಿಯಾಗಿ ದೇಶ ದಿವಾಳಿಯಾಗುತ್ತದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ರಾಜ್ಯದಲ್ಲಿ ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಈವರೆಗೂ ವಿದ್ಯಾರ್ಥಿವೇತನ ಬಂದಿಲ್ಲ. ಬಡ ಕುಟುಂಬದ ಮಕ್ಕಳು ವಿದ್ಯಾರ್ಥಿ ವೇತನ ನಂಬಿ ವಿದ್ಯಾಭ್ಯಾಸ ಮುಂದುವರೆಸಿರುತ್ತಾರೆ. ವಿದ್ಯಾರ್ಥಿವೇತನ ಮಂಜೂರಾಗದೆ ಇರುವುದರಿಂದ ಬಡ ಮಕ್ಕಳಿಗೆ ತೀವ್ರ ತೊಂದರೆ ಉಂಟಾಗಿದೆ ಎಂದರು.
    ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಠಗಳ ಬದಲಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಬಳಸಬೇಕು. ಈ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತಕ್ಷಣವೇ ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
    ರಾಜ್ಯದ ಎಲ್ಲಾ ಮಂದಿರ ಮಸೀದಿಗಳ ಚರ ಮತ್ತು ಸ್ಥಿರಾಸ್ತಿಗಳನ್ನು ಸರ್ಕಾರ ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಅಕ್ರಮ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts