More

    ಮಡಿಕೇರಿ ದಸರಾ ಸಮಿತಿ ನಿಯೋಗದಿಂದ ಸಚಿವರ ಭೇಟಿ

    ಮಡಿಕೇರಿ: ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜುರವರನ್ನು ಭೇಟಿಯಾಗಿ ದಸರಾ ಉತ್ಸವ ಆಚರಣೆಗೆ ರೂ.೨ ಕೋಟಿ ಅನುದಾನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಿ ಕೊಡಬೇಕೆಂದು ಮನವಿ ಸಲ್ಲಿಸಿದರು.


    ಈ ಸಂದರ್ಭ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳನ್ನು ಭೇಟಿಯಾದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದರು. ಈ ಸಂದರ್ಭ ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರು ಹಾಗೂ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಮುಖರಾದ ಟಿ.ಪಿ.ರಮೇಶ್, ಮುನಿರ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು ಹಾಜರಿದ್ದರು.


    ಇದೇ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೂ ನಿಯೋಗ ಮನವಿ ಪತ್ರ ಸಲ್ಲಿಸಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts