More

    ಮಣಿಪುರದಲ್ಲಿ ಕುಕಿ ಉಗ್ರರ ಬಾಂಬ್​​ ದಾಳಿ; ಇಬ್ಬರು ಯೋಧರು ಹುತಾತ್ಮ

    ನವದೆಹಲಿ: ಇಂದು (ಶನಿವಾರ) ಮುಂಜಾನೆ ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ನಡೆಸಿದ ಬಾಂಬ್​​ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ವರ್ಷದಲ್ಲಿ ಎರಡು ಬಾರಿ ಸಿಬಿಎಸ್‌ಇ ಪರೀಕ್ಷೆ: ಸಾಧ್ಯತೆಗಳ ಕುರಿತು ಪರಿಶೀಲಿಸಲು ಸಿಬಿಎಸ್‌ಇಗೆ ಸೂಚನೆ!

    ಮೂಲಗಳ ಪ್ರಕಾರ, ಶಂಕಿತ ಕುಕಿ ದಂಗೆಕೋರರ ಗುಂಪು ನರನ್ಸೇನಾ ಗ್ರಾಮದ ಬೆಟ್ಟದಿಂದ ಕಣಿವೆ ಪ್ರದೇಶದ ಕಡೆಗೆ ಕೇಂದ್ರ ಭದ್ರತಾ ಪಡೆ ಪೋಸ್ಟ್​​​ನ್ನು ಗುರಿಯಾಗಿಟ್ಟುಕೊಂಡು ಗುಂಡಿನ ದಾಳಿ ನಡೆಸಿತು. ಔಟ್‌ಪೋಸ್ಟ್‌ನಲ್ಲಿ ಬಾಂಬ್ ದಾಳಿಯನ್ನು ನಡೆಸಲಾಗಿದೆ. ಇದರಿಂದ ನಾಲ್ವರು ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಚಿಕಿತ್ಸೆ ನೀಡಿದರು, ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಸಂಘರ್ಷ ಮುಂದುವರಿಯುತ್ತಲೇ ಬಂದಿದೆ. ಬೆಟ್ಟಗಳಲ್ಲಿ ಅಡಗಿರುವ ಉಗ್ರರು ಮುಂದಿನ ದಿನಗಳಲ್ಲಿ ದಾಳಿಯನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಕಾರ್ಯಾಚರಣೆಯಲ್ಲಿ ಮೃತಪಟ್ಟ ಇಬ್ಬರು ಯೋಧರು ಸಿಆರ್‌ಪಿಎಫ್‌ನ 128 ಬೆಟಾಲಿಯನ್‌ಗೆ ಸೇರಿದವರು. ಮೃತರನ್ನು ಸಬ್ ಇನ್ಸ್‌ಪೆಕ್ಟರ್ ಎನ್ ಸರ್ಕಾರ್ ಮತ್ತು ಹೆಡ್ ಕಾನ್‌ಸ್ಟೆಬಲ್ ಅರುಪ್ ಸೈನಿ ಎಂದು ಗುರುತಿಸಲಾಗಿದೆ. ಇನ್ನು ಬಾಂಬ್​ ದಾಳಿಯಲ್ಲಿ ಗಾಯಗೊಂಡವರನ್ನು ಇನ್ಸ್​ಪೆಕ್ಟರ್ ಜಾದವ್ ದಾಸ್ ಮತ್ತು ಕಾನ್ ಸ್ಟೇಬಲ್ ಅಫ್ತಾಬ್ ದಾಸ್ ಎಂದು ವರದಿಯಾಗಿದೆ.

    ಈ ಉಗ್ರರು ಮಧ್ಯರಾತ್ರಿಯ ಸುಮಾರು 2.15ಕ್ಕೆ ದಾಳಿ ಶುರು ಮಾಡಿದ್ದಾರೆ. ಇದರ ಜತೆಗೆ ರಾಜ್ಯದಲ್ಲಿ ಚುನಾವಣಾ ಕರ್ತವ್ಯಕ್ಕೆ ಸಿಆರ್‌ಪಿಎಫ್ ಸಿಬ್ಬಂದಿ ನೆಲೆಸಿದ್ದ ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಶಿಬಿರದ ಮೇಲೆ ದಾಳಿ ನಡೆದಿದೆ.

    ಈ ಶಿಬಿರವು ಬೆಟ್ಟಗಳಿಂದ 2 ಕಿಲೋಮೀಟರ್ ದೂರದಲ್ಲಿದೆ. ಶಿಬಿರದಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಮೇಲ್ ಕಾಲುವೆ ಎಂದು ಕರೆಯಲ್ಪಡುವ ಪ್ರದೇಶವಿದೆ. ಇದನ್ನು ಕಳೆದ ವರ್ಷ ಮೇನಲ್ಲಿ ಮಣಿಪುರದಲ್ಲಿ ಹಿಂಸಾಚಾರ ನಡೆದಾಗ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ.

    ಈ ಕಾರಣದಿಂದ ಇಲ್ಲಿ, ಕೇಂದ್ರ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಮೂಲಗಳ ಪ್ರಕಾರ ಶಿಬಿರದ ಮೇಲೆ ದಾಳಿಯನ್ನು ನಡೆಸಲು ಬಂಡುಕೋರರು “ಪಂಪಿ ಗನ್” ಎಂಬ ಕಚ್ಚಾ ಫಿರಂಗಿ ಶಸ್ತ್ರಾಸ್ತ್ರವನ್ನು ಬಳಸಿದರು. ಇದೀಗ ಈ ದಾಳಿಯ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
    ದಂಗೆಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಬೃಹತ್ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸರ್ವಿಸ್ ರಿವಾಲ್ವರ್​ನಿಂದ ಗುಂಡು ಹಾರಿಸಿಕೊಂಡು ಚುನಾವಣಾ ಕರ್ತವ್ಯದಲ್ಲಿದ್ದ ಸೈನಿಕ ಆತ್ಮಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts