More

    ಮಣಿಪುರ ದೌರ್ಜನ್ಯಕ್ಕೆ ಖಂಡನೆ

    ಮಂಡ್ಯ : ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಧ್ವನಿ ಮಹಿಳಾ ಸಂಸ್ಥೆ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

    ಮದ್ದೂರು ಪಟ್ಟಣದ ಪುರಸಭೆ ಕಾರ್ಯಾಲಯ ಮುಂಭಾಗ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಸಂತಾಪ ಸೂಚಿಸಿ ಮೇಣದ ಬತ್ತಿ ಹಚ್ಚಿ ಮೌನ ಧರಣಿ ನಡೆಸಿದರು.


    ಸಂಸ್ಥೆಯ ಅಧ್ಯಕ್ಷೆ ರಜನಿರಾಜ್ ಮಾತನಾಡಿ, ಮಣಿಪುರ ರಾಜ್ಯದಲ್ಲಿ ಜನಾಂಗೀಯ ಗಲಭೆ, ಮಹಿಳೆಯರ ಮೇಲಿನ ಅತ್ಯಾಚಾರ, ಬೆತ್ತಲೆ ಮೆರವಣಿಗೆ ಮಾಡಿದ ದುಷ್ಕರ್ಮಿಗಳ ವಿರುದ್ಧ ರಾಷ್ಟ್ರಪತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


    ಇಂತಹ ಕೃತ್ಯಗಳನ್ನು ದೇಶದ ಸರ್ವೋಚ್ಚ ನ್ಯಾಯಾಲಯವೂ ಖಂಡಿಸಿ, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಆದರೂ ಪ್ರಧಾನಮಂತ್ರಿ ಹೇಳಿಕೆ ಜನರ ಕಣ್ಣೊರೆಸುವ ತಂತ್ರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಹಿಳಾ ಪರ ಹೋರಾಟಗಾರರಾದ ಯಶೋದಾ, ವೀಣಾ, ರಾಜ್ಯ ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಚನ್ನಸಂದ್ರ ಲಕ್ಷ್ಮಣ್ ಇತರರು ಇದ್ದರು. ಇದೇ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts