More

    ಮಣಿಪುರ ಸರ್ಕಾರ ವಜಾಕ್ಕೆ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ

    ದಾವಣಗೆರೆ: ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ತೀವ್ರ ಖಂಡನೀಯ. ತಕ್ಷಣ ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಒತ್ತಾಯಿಸಿದರು.
    ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ ದೇಶವನ್ನು ತಲೆತಗ್ಗಿಸುವಂತೆ ಮಾಡಿದೆ. ಪ್ರಧಾನಮಂತ್ರಿ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆಯೆ ಇಲ್ಲ ಎಂಬುದಕ್ಕೆ ಘಟನೆ ಸಾಕ್ಷಿಯಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
    ಮೇ ತಿಂಗಳಲ್ಲಿ ನೂರಾರು ಜನರ ಮುಂದೆ ಘಟನೆ ನಡೆದಿದ್ದರೂ ಪ್ರಧಾನಿ ಅವರು ತಮಗೆ ಏನೂ ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಗುಪ್ತಚರ ಹಾಗೂ ಪೊಲೀಸ್ ಇಲಾಖೆ ಏನು ಮಾಡುತ್ತಿವೆ ಎಂದು ಪ್ರಶ್ನಿಸಿದ ಅವರು, ಘಟನೆ ಕುರಿತಂತೆ ಬಿಜೆಪಿ ಪ್ರಭಾವಿ ಮಹಿಳಾ ಸಚಿವರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಶೋಭಾ ಕರಂದ್ಲಾಜೆ ಚಕಾರ ಎತ್ತಿಲ್ಲ ಎಂದು ಟೀಕಿಸಿದರು.
    ಪ್ರಧಾನಿ ಮೋದಿ ಅವರು ಘಟನೆ ಕುರಿತು ದೇಶದ ಮುಂದೆ ಕ್ಷಮೆ ಯಾಚಿಸಬೇಕು ಹಾಗೂ ಮಣಿಪುರ ಸರ್ಕಾರ ವಜಾಗೆ ಕ್ರಮ ಕೈಗೊಳ್ಳಬೇಕು, ರಾಷ್ಟ್ರಪತಿ ಮತ್ತು ಸುಪ್ರೀಂ ಕೋರ್ಟ್ ಮಣಿಪುರ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವ ಜತೆಗೆ ಮಹಿಳೆಯರ ರಕ್ಷಣೆಗೆ ಧಾವಿಸಬೇಕು ಎಂದು ಆಗ್ರಹಿಸಿದರು.
    ನಂಜಾನಾಯ್ಕ, ಕೆ.ಎಂ. ಮಂಜುನಾಥ್, ಬಿ.ಎನ್. ವಿನಾಯಕ, ಎಂ.ಕೆ. ಲಿಯಾಕತ್, ಗುರುಮೂರ್ತಿ, ಮಿಯಾಪುರ ಬಸವರಾಜ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts