More

    ಮತಗಟ್ಟೆಗಳಲ್ಲಿ 2 ಮತ ಯಂತ್ರಗಳ ವ್ಯವಸ್ಥೆ

    ಹನೂರು: ಈ ಬಾರಿ ಹನೂರು ವಿಧಾನಸಭಾ ಕ್ಷೇತ್ರದಿಂದ 18 ಅಭ್ಯರ್ಥಿಗಳು ಸ್ಪರ್ಧಿಸಿರುವುದರಿಂದ ಮತದಾನಕ್ಕೆ ಮತಗಟ್ಟೆಗಳಲ್ಲಿ 2 ಮತ ಯಂತ್ರಗಳನ್ನು ಇರಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಮಧುಸೂದನ್ ತಿಳಿಸಿದರು.


    ಪಟ್ಟಣದ ಚುನಾವಣಾ ಕಚೇರಿಯಲ್ಲಿ ಗುರುವಾರ ಚುನಾವಣೆ ಮಾಹಿತಿ ನೀಡುವ ಸಂಬಂಧ ಆಯೋಜಿಸಿದ್ದ ವಿವಿಧ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.


    ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆ, ಪುರುಷ ಹಾಗೂ ಇತರ ಸೇರಿದಂತೆ ಒಟ್ಟು 2,13,725 ಮತದಾರರಿದ್ದು, 253 ಮತಗಟ್ಟೆಗಳನ್ನು ತೆರೆಯಲಾಗಿದೆ. ಇದರಲ್ಲಿ ಮೊಬೈಲ್ ಸಂಪರ್ಕ ಸಿಗದ ಗ್ರಾಮಗಳಲ್ಲಿ 31 ಹಾಗೂ ಕಾಡಂಚಿನ ಗ್ರಾಮಗಳಲ್ಲಿ 39 ಮತಗಟ್ಟೆಗಳನ್ನು ತೆರೆಯಲಾಗಿದೆ. 80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. ಆದಾಗ್ಯೂ ಆಸಕ್ತಿ ಇರುವವರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಬಹುದು. ಮತದಾನಕ್ಕೆ 608 ಬಿಯು, 304 ಸಿಯು ಹಾಗೂ 329 ವಿವಿ ಪ್ಯಾಟ್‌ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ವಿವಿ ಪ್ಯಾಟ್‌ಗೆ ಸಂಖ್ಯೆಯನ್ನು ನೀಡಲಾಗಿದ್ದು, ಯಾವ ಪೋಲಿಂಗ್ ಸ್ಟೇಷನ್‌ಗೆ ಯಾವ ಯೂನಿಟ್ ರವಾನೆಯಾಗುತ್ತದೆ ಎಂಬುದನ್ನು ತೋರಿಸುತ್ತದೆ. ಏ.29ರಂದು ವಿದ್ಯುನ್ಮಾನ ಮತಯಂತ್ರದ ಮೂಲಕ ಒಂದು ಸಾವಿರ ಮತವನ್ನು ಚಲಾಯಿಸಲಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಆಗಮಿಸಿ ಖಚಿತ ಪಡಿಸಿಕೊಳ್ಳಬಹುದು. ಸಂದೇಹವಿದ್ದಲ್ಲಿ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.


    ಚುನಾವಣಾ ಕಚೇರಿಗೆ ಹನೂರು ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ಉಪೇಂದ್ರ ಎಸ್. ಚೌಧರಿ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಯನ್ನು ನೀಡಿದರು.


    ಸಹಾಯಕ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಗುರುಪ್ರಸಾದ್, ತಾಪಂ ನರೇಗಾ ಸಹಾಯಕ ನಿರ್ದೇಶಕ ರವೀಂದ್ರ, ಶಿರಸ್ಥೇದಾರ ಉಮಾ, ಆರ್‌ಐ ಮಹದೇವಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ, ಕಂದಾಯ ಇಲಾಖೆಯ ನೌಕರರು, ವಿವಿಧ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts