More

    ಮತಗಟ್ಟೆಗಳಿಗೆ ತೆರಳಿದ ಸಿಬ್ಬಂದಿ

    ಹನೂರು: ಬುಧವಾರ ನಡೆಯಲಿರುವ ಮತದಾನದ ಹಬ್ಬಕ್ಕೆ ರಾಜ್ಯದ 221ನೇ ವಿಧಾನಸಭಾ ಕ್ಷೇತ್ರವಾದ ಹನೂರಿನಲ್ಲಿ ಸಕಲ ಸಿದ್ಧತೆ ನಡೆದಿದ್ದು, ಮಂಗಳವಾರ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜನೆಗೊಂಡ ಮತಗಟ್ಟೆಗಳಿಗೆ ತೆರಳಿದರು.
    ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯಲ್ಲಿನ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತಯಂತ್ರ, ಸಿಯು ಹಾಗೂ ಇನ್ನಿತರ ಅಗತ್ಯ ಸಲಕರಣೆಗಳನ್ನು ಪಡೆದುಕೊಂಡರು. ಬಳಿಕ ಅಧಿಕಾರಿಗಳಿಂದ ಸೂಚನೆಯನ್ನು ಪಡೆದು ಮಧ್ಯಾಹ್ನ 1.30ರ ಬಳಿಕ ಮತಗಟ್ಟೆಗಳಿಗೆ ತೆರಳಿದರು. ಕಾಡಂಚಿನ ಗ್ರಾಮ ಹಾಗೂ ಹೆಚ್ಚು ಅಂತರವಿರುವ ಗ್ರಾಮಗಳಿಗೆ ತೆರಳಲು ಮೊದಲ ಆದ್ಯತೆ ನೀಡಲಾಗಿತ್ತು. ಬಳಿಕ ಇತರ ಮತಗಟ್ಟೆಗಳಿಗೆ ವಾಹನಗಳು ತೆರಳಿದವು.

    ಅಗತ್ಯ ಸಿದ್ಧತೆ: ಜಿಲ್ಲೆಯಲ್ಲಿಯೇ ಹೆಚ್ಚು ಮತದಾರರನ್ನು ಹೊಂದಿರುವ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪುರುಷ, ಮಹಿಳೆ ಹಾಗೂ ಇತರ ಸೇರಿದಂತೆ ಒಟ್ಟು 2,21,557 ಮತದಾರರಿದ್ದು, 253 ಮತಗಟ್ಟೆಗಳನ್ನು ತೆರೆಯಲಾಗಿದೆ. ಇದರಲ್ಲಿ ಮೊಬೈಲ್ ಸಂಪರ್ಕ ಸಿಗದ 31 ಹಾಗೂ ಕಾಡಂಚಿನ ಗ್ರಾಮಗಳಲ್ಲಿ 39 ಮತಗಟ್ಟೆಗಳನ್ನು ತೆರೆಯಲಾಗಿದೆ. ಮತದಾನಕ್ಕೆ 608 ಬಿಯು, 304 ಸಿಯು ಹಾಗೂ 329 ವಿವಿ ಪ್ಯಾಟ್‌ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಕ್ಷೇತ್ರದ ಮತಗಟೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಲಾಗಿದ್ದು, ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. 253 ಸೆಕ್ಟರ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದ್ದು, 26 ಮೈಕ್ರೊ ವೀಕ್ಷಕರನ್ನು ನಿಯೋಜಿಸಲಾಗಿದೆ. ಮತಗಟ್ಟೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾಲ್ವರು ಕಾರ್ಯನಿರ್ವಹಿಸಲಿದ್ದಾರೆ. ಚುನಾವಣಾ ಕಾರ್ಯಕ್ಕೆ 47 ಬಸ್, 1 ಮಿನಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಅರಣ್ಯದಂಚಿನ ಮತಗಟ್ಟೆಗಳಿಗೆ 15 ಜೀಪ್‌ಗಳ ವ್ಯವಸ್ಥೆ ಮಾಡಲಾಗಿದೆ. ಮೊಬೈಲ್ ನೆಟ್‌ವರ್ಕ್ ಸಿಗದ ಪ್ರದೇಶಗಳಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖೆಯ ವೈರ್‌ಲೆಸ್ ಬಳಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರಿಯ ಕೈಗಾರಿಕಾ ಪಡೆಯ ಸಿಬ್ಬಂದಿಯನ್ನು ಮತಗಟ್ಟೆಗಳಲ್ಲಿ ನಿಯೋಜಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts