More

    ಮತಗಟ್ಟೆ ಅಧಿಕಾರಿಗಳ ಮೇಲಿದೆ ಚುನಾವಣೆ ಯಶಸ್ಸು

    ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಮತದಾನ ಸುಗಮವಾಗಿ ನಡೆಯಲು ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ ಸಹಾಯಕ ಅಧ್ಯಕ್ಷಾಧಿಕಾರಿಗಳ ಪಾತ್ರ ಬಹಳ ಪ್ರಮುಖವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಹೇಳಿದರು.
     ದಾವಣಗೆರೆ ಉತ್ತರ, ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಆರ್‌ಒ, ಎಪಿಆರ್‌ಒಗಳಿಗೆ ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
     ಮತಗಟ್ಟೆ ಅಧಿಕಾರಿಗಳು ಮತದಾನದ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಬೇಕು. ನಿಮಗೆ ಸಮಸ್ಯೆಯಾಗದಂತೆ ಮಾರ್ಗದರ್ಶನಕ್ಕಾಗಿ ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತರಬೇತಿ ಜತೆಗೆ ನಿಮಗೆ ಕೊಡಲಾದ ಮಾರ್ಗಸೂಚಿ ಕೈಪಿಡಿಯನ್ನು ಸಂಪೂರ್ಣವಾಗಿ ಅವಲೋಕಿಸಿ ತಿಳಿದುಕೊಂಡು ಯಾವುದೇ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
     ಮತದಾನ ದಿನ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದೆ ಸಮಯಕ್ಕೆ ಸರಿಯಾಗಿ ಮತದಾನ ಪ್ರಾರಂಭ ಮಾಡಬೇಕು. ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಸಮಾಧಾನವಾಗಿ ಹಾಗೂ ಬಹಳ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಹೇಳಿದರು.
     ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 1946 ಮತಗಟ್ಟೆಗಳಿದ್ದು ಜಿಲ್ಲೆಯಲ್ಲಿ ಅವುಗಳ ಸಂಖ್ಯೆ 1693. ಮತದಾನದ ದಿನ ಪ್ರತಿ ಮತಗಟ್ಟೆಯಲ್ಲಿ ನಾಲ್ಕು ಸಿಬ್ಬಂದಿ ಕಾರ್ಯ ನಿರ್ವಹಿಸುವರು. ಹೆಚ್ಚುವರಿಯಾಗಿ ಮತಗಟ್ಟೆ ಸಿಬ್ಬಂದಿ ಸೇರಿ ಒಟ್ಟು 9192 ಮತದಾನ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.
     …
     * ಮತದಾನ ಸಿಬ್ಬಂದಿಗೆ ಅಂಚೆ ಮತಪತ್ರ
     ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಸಹ ಮತದಾನ ಮಾಡಲು ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ನಮೂನೆ 12 ಮತ್ತು ನಮೂನೆ 12ಎ ನೀಡಲಾಗುತ್ತದೆ. ತರಬೇತಿ ನಡೆದ ಸ್ಥಳಗಳಲ್ಲಿ ಮತದಾನ ಕರ್ತವ್ಯಕ್ಕೆ ನೇಮಕವಾದ ಅಧಿಕಾರಿ, ಸಿಬ್ಬಂದಿಗಳಿಗೆ ಈ ನಮೂನೆಗಳನ್ನು ವಿತರಣೆ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ವಿತರಿಸಲು ತಂಡಗಳನ್ನು ನೇಮಕ ಮಾಡಲಾಗಿತ್ತು.
     ಪ್ರಸ್ತುತ ಲೋಕಸಭಾ ಚುನಾವಣೆಯಾಗಿರುವುದರಿಂದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಬೇರೆ ಜಿಲ್ಲೆಯಲ್ಲಿನ ಮತದಾರರ ಪಟ್ಟಿಯಲ್ಲಿ ಹೆಸರಿದ್ದಲ್ಲಿ ಅಂತಹ ಚುನಾವಣಾ ಕರ್ತವ್ಯ ಸಿಬ್ಬಂದಿಗೆ ನಮೂನೆ 12 ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯಲ್ಲಿಯೆ ಕರ್ತವ್ಯ ನಿರ್ವಹಿಸುತ್ತಿದ್ದು ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಾಗಿದ್ದಲ್ಲಿ ಅವರಿಗೆ ನಮೂನೆ 12ಎ ವಿತರಣೆ ಮಾಡಲಾಗುತ್ತದೆ. 12ಎ ನಮೂನೆ ಪಡೆದವರು ಕರ್ತವ್ಯ ನಿರ್ವಹಿಸುವ ಮತಗಟ್ಟೆಯಲ್ಲಿಯೆ ಮತದಾನ ಮಾಡುವರು. 12 ನಮೂನೆ ಪಡೆದವರು ಸೌಲಭ್ಯ ಕೇಂದ್ರಗಳಲ್ಲಿ ಹಕ್ಕು ಚಲಾಯಿಸುವರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts