More

    ಮತಗಟ್ಟೆ, ಚೆಕ್‌ಪೋಸ್ಟ್ ಪರಿಶೀಲಿಸಿದ ಡಿಸಿ

    ಚಿತ್ರದುರ್ಗ: ಲೋಕಸಭಾ ಚುನಾವಣೆ ಅಂಗವಾಗಿ ನಗರದ ವಿವಿಧ ಮತಗಟ್ಟೆ, ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆಗಳು ಮತದಾರ ಸ್ನೇಹಿ, ಬೇಸಿಗೆಯಾದ್ದರಿಂದ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ಶೌಚಗೃಹ ಇರಬೇಕು. ಅಂಗವಿಕಲರು, ವಯೋವೃದ್ಧರ ಅನುಕೂಲಕ್ಕಾಗಿ ವ್ಹೀಲ್‌ಚೇರ್, ರ್ಯಾಂಪ್ ಸೌಲಭ್ಯ ಕಲ್ಪಿಸಬೇಕು. ತಾಯಂದಿರು ಮಕ್ಕಳಿಗೆ ಎದೆ ಹಾಲುಣಿಸಲು ಪ್ರತ್ಯೇಕ ಕೋಣೆ ಕಾಯ್ದಿರಿಸಬೇಕು ಎಂದು ಟಿ.ವೆಂಕಟೇಶ್ ಸೂಚಿಸಿದರು.

    ತಾಲೂಕಿನ ಕ್ಯಾದಿಗೆರೆ, ನಗರದ ಆರ್‌ಟಿಒ ಕಚೇರಿ ಮುಂಭಾಗದ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜಿಸಿರುವ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಿದರು. ಸಂತ ಜೋಸೆಫರ ಕಾನ್ವೆಂಟ್ ಶಾಲೆ, ಮಹಾರಾಣಿ ಕಾಲೇಜು, ಕಾಮನಬಾವಿ ಬಡಾವಾಣೆ, ವಿ.ಪಿ.ಬಡಾವಣೆ ಶಾಲೆಗಳ ಮತಗಟ್ಟೆಗಳಿಗೆ ಭೇಟಿ ನೀಡಿದರು.

    ತರಾಟೆ ತೆಗೆದುಕೊಂಡ ಡಿಸಿ: ನಗರದ ಜೋಗಿಮಟ್ಟಿ ರಸ್ತೆಯ ಕರುವಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಪರಿಶೀಲಿಸಿ, ಶಾಲೆಯಲ್ಲಿ ಸಮರ್ಪಕವಾಗಿ ಬಿಸಿಯೂಟದ ದವಸ-ಧಾನ್ಯ ನಿರ್ವಹಣೆ ಆಗದಿರುವುದು ಕಂಡುಬಂದಿತು. ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸೂಕ್ತ ಸ್ಥಳದಲ್ಲಿ ಶೇಖರಣೆ, ದಾಸ್ತಾನು ಸಂಗ್ರಹದ ನಿಖರ ಮಾಹಿತಿ ಇರಬೇಕು ಎಂದು ಸೂಚಿಸಿದರು.

    ತಹಸೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts