More

    ಮತದಾನದಲ್ಲಿ ತಪ್ಪದೆ ಭಾಗಿಯಾಗಿ

    ಕಲಕೇರಿ: ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು 18 ವರ್ಷ ಪೂರೈಸಿದ ಎಲ್ಲರೂ ಮತದಾನದಲ್ಲಿ ಭಾಗಿಯಾಗಬೇಕು ಎಂದು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಬಸವಂತಪ್ಪ ಚನಗೊಂಡ ಹೇಳಿದರು.

    ಗ್ರಾಮದ ಎಸ್‌ಎಂವಿವಿ ಸಂಘದ ಬಸವೇಶ್ವರ ಸಂಯುಕ್ತ ಪಪೂ ಕಾಲೇಜು ಹಾಗೂ ವಿವಿಧ ಅಂಗ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಮತದಾನವೆಂಬುದು ಜನತೆಯ ಪ್ರಮುಖ ಹಕ್ಕು. ಪ್ರಜೆಗಳಿಂದ ಆಯ್ಕೆಯಾದ ಸರ್ಕಾರ ಮತ್ತು ಜನಪ್ರತಿನಿಧಿಗಳು ಜನರ ಆಶೋತ್ತರಗಳಂತೆಯೇ ನಡೆಯಬೇಕೆಂಬುದು ಸಂವಿಧಾನದ ನಿಯಮವಾಗಿದೆ. ಜನರ ಒಳಿತು ಬಯಸುವ ಜನ ನಾಯಕನನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆ ನಡೆಯುತ್ತದೆ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ ಪ್ರತಿವರ್ಷ ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ ಎಂದು ಹೇಳಿದರು.

    ಪ್ರಾಚಾರ್ಯ ಸಿ.ಎಸ್.ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಜಗದೀಶ ಗುಮಶೆಟ್ಟಿ, ಇಎಎಲ್‌ಸಿ ಕ್ಲಬ್ ಸಂಚಾಲಕ ಬಸವರಾಜ ಕುಂಬಾರ, ಎಸ್.ಪಿ.ರಾಣಗಟ್ಟಿ ಮಾತನಾಡಿದರು.

    ಉಪನ್ಯಾಸಕರಾದ ಡಾ.ಜಿ.ಜಿ.ಮೇಡೆದಾರ, ಎಸ್.ಎಸ್.ಕಲಶೆಟ್ಟಿ, ರವಿಕುಮಾರ ಗುಮಶೆಟ್ಟಿ, ಸುರೇಶ ಬಿರಾದಾರ, ಜಗದೀಶ ಕಾದಳ್ಳಿ, ರವಿ ಕುಲಕರ್ಣಿ, ಶಿವಾನಂದ ಹರಿಜನ, ವಿಶ್ವನಾಥ ಸಿಂದಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts