More

    ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಿ

    ಬಾಗಲಕೋಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೆಲ್ಲ ತಮ್ಮ ಹಕ್ಕು ಹಾಗೂ ಜವಾಬ್ದಾರಿಗಳನ್ನು ಅರಿತು ತಪ್ಪದೇ ಮತದಾನ ಮಾಡುದಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯ ನೇರಳೆ ಹೇಳಿದರು.

    ನವನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ, ವಕೀಲರ ಸಂಘ, ನಗರಸಭೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದೊಂದಿಗೆ ಹಮ್ಮಿಕೊಂಡ ಮತದಾರರ ಜಾಗೃತಿ ಅಭಿಯಾನದ ಜಾಥಾಕ್ಕೆ ಚಾಲನೆ ನೀಡಿ ಅವರು ಪ್ರತಿ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ನೂರಕ್ಕೆ ನೂರರಷ್ಟು ಮತದಾನವಾಗಬೇಕಾದರೆ ಅರ್ಹ ಮತದಾರರೆಲ್ಲ ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು.

    ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಶಶಿಧರ ಕುರೇರ ಮಾತನಾಡಿ ದೇಶದ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗೆ ಬಲಿಷ್ಟ ಪ್ರಜಾಪ್ರಭುತ್ವ ಸದ್ಯದ ಪರಿಸ್ಥಿತಿಯಲ್ಲಿ ಅವಶ್ಯವಾಗಿದ್ದು, ತಪ್ಪದೇ ಎಲ್ಲರೂ ಮತದಾನ ಮಾಡುವಂತೆ ತಿಳಿಸಿದರು. ಬಲಿಷ್ಟ ಪ್ರಜಾಪ್ರಭುತ್ವದ ಬುನಾದಿಗೆ ಪ್ರತಿಯೊಬ್ಬ ನಾಗರಿಕರು ಮತದಾನ ಮಾಡಿದಲ್ಲಿ ಸದೃಡವಾದ ಸರ್ಕಾರ ನೀಡಲು ಸಾದ್ಯವಾಗುತ್ತದೆ. ಮತದಾನದ ಹಕ್ಕನ್ನು ಪಡೆದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವದರೊಂದಿಗೆ ಇತರರನ್ನು ಮತದಾನ ಮಾಡುವಂತೆ ಮನವಲಿಸಬೇಕೆಂದರು.

    ನಂತರ ಜಾಗೃತಿ ಜಾಥಾ ಜಿಲ್ಲಾ ನ್ಯಾಯಾಲಯದಿಂದ ಪ್ರಾರಂಭವಾಗಿ ನಗರಸಭೆಗೆ ಮುಕ್ತಾಯಗೊಂಡಿತು. ಜಾಥಾದಲ್ಲಿ ಜಾಥಾದೂದ್ದಕ್ಕೂ ಮತದಾನ ಜಾಗೃತಿಯ ಘೋಷಣೆಗಳನ್ನು ಕೂಗಲಾಯಿತು. ಜಾಥಾದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರೂ ಮತದಾನ ಜಾಗೃತಿ ಸಂದೇಶವುಳ್ಳ ಟೋಪಿ ಹಾಗೂ ಟೀಶರ್ಟ ಧರಿಸಿ ಎಲ್ಲರ ಗಮನ ಸೆಳೆದರು. ನಗರಸಭೆ ಆವರಣದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ನೆರೆದ ಜನರ ಗಮನ ಸೆಳೆಯಲಾಯಿತು.

    ಜಾಥಾದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಬಿ.ರೆಹಮಾನ, ಜಿ.ಎ.ಮೂಲಿಮನಿ, ಪಲ್ಲವಿ ಆರ್, ಹೇಮಾ ಪಸ್ತಾಪೂರ, ದ್ಯಾವಪ್ಪ ಎಸ್.ಬಿ, ಮಹೇಶ ಪಾಟೀಲ, ಮುರಗೇಂದ್ರ ತುಬಾಕೆ, ಪ್ರಶಾಂತ ಚಟ್ನಿ ಎಸ್, ಕೃಷ್ಣಮೂರ್ತಿ ಪಡಸಲಗಿ, ನಗರಸಭೆ ಪೌರಾಯುಕ್ತ ವಾಸಣ್ಣ ಆರ್, ವಕೀಲರ ಸಂಘದ ಅಧ್ಯಕ್ಷ ಕಾರ್ಯದರ್ಶಿ ಶ್ರೀಶೈಲ ಹಾವರಗಿ, ಜಿ.ಪಂ ಯೋಜನಾ ನಿರ್ದೇಶಕ ಶಶಿಕಾಂತ ಶಿವಪುರೆ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ವರ್ಗ ಹಾಗೂ ನಗರಸಭೆ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts