More

    ಮತದಾನ ಜಾಗೃತಿ ಅಭಿಯಾನಕ್ಕೆ ಡಿಸಿ ಜಾನಕಿ ಚಾಲನೆ

    ಬಾಗಲಕೋಟೆ: ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ರ ಹಿನ್ನಲೆಯಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಮುಧೋಳ ಸಂಗಣ್ಣ ರಾಯಣ್ಣ ಸರ್ಕಲ್‌ನಲ್ಲಿ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

    ಗುರುವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮುಧೋಳ ತಾಲೂಕಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನವು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭವಾಗಿ ನಾನಾ ಕಡೆ ಸಂಚರಿಸಿ ರನ್ನ ವೃತ್ತರದ ಮಾರ್ಗವಾಗಿ ತಾಲೂಕಾ ಪಂಚಾಯತ ಕಾರ್ಯಾಲಯಕ್ಕೆ ಮುಕ್ತಾಯಗೊಂಡಿತು. ಜಾಥಾದಲ್ಲಿ ಪುರಸಭೆ ಪೌರಕಾರ್ಮಿಕರು ಮತದಾನ ಜಾಗೃತಿಯ ಘೋಷಣಾ ಫಲಕಗಳನ್ನು ಹಿಡಿದುಕೊಂಡು ಜಾಥಾದೂದ್ದಕ್ಕು ಘೋಷಣೆ ಕೂಗಿದರು. ಸ್ವಚ್ಛ ವಾಹಿನಿಗಳಲ್ಲಿ ಧ್ವನಿವರ್ಧಕದ ಮೂಲಕ ಮತದಾನದ ಮಹತ್ವವನ್ನು ಸಾರಲಾಯಿತು.

    ಪ್ರಾರಂಭದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ನೆರದ ಜನರ ಗಮನ ಸೆಳೆದರು. ಜಾಥಾದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ತಹಶೀಲ್ದಾರ ವಿನೋದ ಹತ್ತಳ್ಳಿ, ಮುಧೋಳ ತಾ.ಪಂ ವೀರನಗೌಡ ಯೇಗನಗೌಡ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts