More

    ಮತದಾನ ಮಾಡುವಂತೆ ಪ್ರೇರೇಪಿಸಿ

    ಬಳ್ಳಾರಿ : ನೀವು ಮತ ಚಲಾಯಿಸಿ, ನಿಮ್ಮ ಪರಿವಾರದವರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದರು.
    ಇಲ್ಲಿನ ನೂತನ ಜಿಲ್ಲಾಡಳಿತ ಭವನ ಆವರಣದಿಂದ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಕಳೆದ ಚುನಾವಣೆಗಳಲ್ಲಿ ಬಳ್ಳಾರಿ ನಗರದಲ್ಲಿ ಕಡಿಮೆ ಮತದಾನವಾದ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯನ್ನು ಗುರಿಯಾಗಿಸಿ, ಮತದಾರರಲ್ಲಿ ಜಾಗೃತಿ ಮೂಡಿಸಲು ಸೋಮವಾರ ನಡೆದ ಬೈಕ್ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಚುನಾವಣೆಯು ಹಬ್ಬವಿದ್ದಂತೆ, ಪ್ರತಿಯೊಬ್ಬ ನಾಗರಿಕರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಹೆಮ್ಮೆಯಿಂದ ಮತ ಚಲಾಯಿಸುವ ಮೂಲಕ ಸಂಭ್ರಮದಿಂದ ಆಚರಿಸಬೇಕು. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಈ ಬಾರಿ ಜಿಲ್ಲೆಯಲ್ಲಿ ಶೇ.100 ರಷ್ಟು ಮತದಾನ ಪ್ರಮಾಣ ಹೆಚ್ಚಲು ಶ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
    ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಭವ್ಯ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಮತ್ತು ಮುಂದುವರಿಸಲು ಚುನಾವಣೆಯಲ್ಲಿ ಮತದಾನ ಮಾಡುವ ಪ್ರಕ್ರಿಯೆ ಬಹುಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಮತದಾನ ಮಾಡಬೇಕು. ಜಿಲ್ಲೆಯಲ್ಲಿ ಈ ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಳವಾಗಲು ಎಲ್ಲಾ ಅಧಿಕಾರಿಗಳು ಸಹಕರಿಸಬೇಕು ಎಂದರು. ಸಹಾಯಕ ಆಯುಕ್ತ ಹೇಮಂತ್ ಮಾತನಾಡಿದರು. ಡಿಸಿ ಪ್ರಶಾಂತ ಕುಮಾರ ಮಿಶ್ರಾ ,ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಹೆಲ್ಮೆಟ್ ಧರಿಸಿ, ಮತದಾನ ಜಾಗೃತಿಯ ಪ್ರದರ್ಶನ ಫಲಕದೊಂದಿಗೆ ಸ್ಕೂಟರ್ ಏರಿ, ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಬೈಕ್ ಜಾಥಾದಲ್ಲಿ ಪಾಲ್ಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸ್ಕೂಟರ್ ಚಲಾಯಿಸಿ ಎಲ್ಲರ ಗಮನ ಸೆಳೆದರು.
    ನಾನು ಹೆಮ್ಮೆಯ ಮತದಾರ ಕಡ್ಡಾಯವಾಗಿ ಮತ ಚಲಾಯಿಸುವೆ ಎನ್ನುವ ಸೆಲ್ಪಿ ಬೂತ್ ತೆರೆಯಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts