More

    ಮತದಾರರ ಜಾಗೃತಿ ಜಾಥಾಗೆ ಚಾಲನೆ


    ಹಾಸನ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಂಗವಾಗಿ ಆಯೋಜಿಸಿದ್ದ ಮತದಾರರ ಜಾಗೃತಿ ಜಾಥಾಗೆ ತಹಸೀಲ್ದಾರ್ ರಮೇಶ್ ಬೇಲೂರು ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಚಾಲನೆ ನೀಡಿದರು.


    ತಹಸೀಲ್ದಾರ್ ರಮೇಶ್ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಂಗವಾಗಿ ಅರ್ಹ ಮತದಾರರನ್ನು ಪಟ್ಟಿಯಲ್ಲಿ ಸೇರಿಸುವ ಮೂಲಕ ಮತದಾರರಿಗೆ ಇರುವ ಗೊಂದಲವನ್ನು ಬಗೆಹರಿಸಿ ನಿರ್ಭೀತಿಯಿಂದ ಮತದಾನ ಮಾಡಬಹುದು ಎಂದರು.


    ಅಲ್ಲದೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಂದರ್ಭ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿ ಮಾಡಲು ತೆಗೆದು ಹಾಕಲು, ವರ್ಗಾವಣೆ ಮಾಡಿಸಲು, ಸಂಬಂಧಿಸಿದ ಮತಗಟ್ಟೆ ಅಧಿಕಾರಿ ಹಾಗೂ ಬಿಎಲ್‌ಒಗಳನ್ನು ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಕೊಟ್ಟು ಸರಿಪಡಿಸಿಕೊಳ್ಳಬಹುದಾಗಿದೆ ಎಂದರು.


    ಹೊಸದಾಗಿ ಮತದಾರ ಪಟ್ಟಿಗೆ ಸೇರಲು 2022 ಡಿಸೆಂಬರ್ 8ರವರೆಗೂ ಕಾಲಾವಕಾಶವಿದೆ. ಈಗಾಗಲೇ ತಾಲೂಕಿನಲ್ಲಿ ಒಟ್ಟು 1,90,476 ಮತದಾರರಿದ್ದು, 2022ರ ಜನವರಿಯಿಂದ ಇಲ್ಲಿವರೆಗೂ 3,212, ಯುವ ಮತದಾರರು ಸೇರ್ಪಡೆಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಮತದಾರರು ಚುನಾವಣಾ ಮತದಾನದಿಂದ ದೂರ ಉಳಿಯುತ್ತಿರುವುದು ಬೇಸರದ ಸಂಗತಿಯಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಸಿ.ಎಚ್.ಮಹೇಶ್, ಶಿರಸ್ತೇದಾರ್ ಮೋಹನ್‌ಕುಮಾರ್, ವಿವಿಧ ಮತಗಟ್ಟೆ ಅಧಿಕಾರಿಗಳು, ಚುನಾವಣೆ ಶಾಖೆಯ ಸಿಬ್ಬಂದಿ ಆಯಿಶಾ, ಹರೀಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts