More

    ಮತದಾರರ ಪಟ್ಟಿ ಸಿದ್ಧಪಡಿಸಿ -ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ

    ದಾವಣಗೆರೆ: ಬರುವ ವರ್ಷದ ಮಾರ್ಚ್, ಏಪ್ರಿಲ್‌ನಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಮತದಾರ ಪಟ್ಟಿಯಿಂದ ಯಾರ ಹೆಸರೂ ಕೈಬಿಟ್ಟು ಹೋಗದಂತೆ ಮತದಾರರ ಪಟ್ಟಿ ತಯಾರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವತ್ರಿಕ ಲೋಕಸಭಾ ಚುನಾವಣೆ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಮತದಾರರ ತಿದ್ದುಪಡಿ, ಸೇರ್ಪಡೆಗೆ ಜನವರಿ 12ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಮತದಾರರ ಪಟ್ಟಿ ತಯಾರಿಸಬೇಕು. ಇದರಿಂದ ಸಮರ್ಪಕ ಚುನಾವಣೆ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
    2024ರ ಜನವರಿ 1ಕ್ಕೆ 18 ವರ್ಷ ತುಂಬುವ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಮತಗಟ್ಟೆ ಅಧಿಕಾರಿಗಳು ಮನೆಮನೆಗೂ ತೆರಳಿ ಪಟ್ಟಿ ತಯಾರಿಸಬೇಕು ಎಂದು ತಿಳಿಸಿದರು.
    ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ಆಗ್ನೇಯ ಮತ್ತು ನೈರುತ್ಯ ಶಿಕ್ಷಕರ ಸದಸ್ಯ ಸ್ಥಾನಗಳು 2024ರ ಜೂನ್ 21ರಂದು ತೆರವಾಗಲಿವೆ. ವಿವಿಧ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ 2023 ಡಿ. 30ರಂದು ಅಂತಿಮ ಮತದಾರರ ಪಟ್ಟಿ ಪ್ರಚುರಪಡಿಸಲಾಗಿದೆ ಎಂದು ತಿಳಿಸಿದರು.
    ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಮತಗಟ್ಟೆ ಹಂತದ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts