More

    ಮತದಾರರ ಪಟ್ಟಿ, ಹೆಸರು ಸೇರ್ಪಡೆಗೆ ವಿಶೇಷ ನೋಂದಣಿ

    ಚಿತ್ರದುರ್ಗ: ತಪ್ಪದೆ ಮತಪಟ್ಟಿಗೆ ತಮ್ಮ ಹೆಸರು ನೋಂದಾಯಿಸುವಂತೆ ಡಿಸಿ ಜಿಆರ್‌ಜೆ ದಿವ್ಯಾಪ್ರಭು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು. ನಗ ರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ವಿಶೇಷ ನೋಂದಣಿ ಹಾಗೂ ಮತದಾರರ ಜಾಗೃತಿ ಕಾರ‌್ಯಕ್ರಮದಲ್ಲಿ ಮಾತನಾ ಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಕಾರ‌್ಯ ಜಿಲ್ಲೆಯಲ್ಲಿ ಈಗಾಗಲೇ ಆರಂಭವಾಗಿದೆ. ನ.18ರಿಂದ 2 ದಿನಗಳ ಕಾಲ, ಜಿಲ್ಲಾ ದ್ಯಂತ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ.
    ಅರ್ಹ ಯುವಜನರು, ನಾಗರಿಕರು ಮತಪಟ್ಟಿಗೆ ತಮ್ಮ ಹೆಸರು ನೋಂದಾಯಿಸ ಬೇಕು, ಇದಕ್ಕಾಗಿ ಜಿಲ್ಲೆಯ ಪ್ರತಿ ಮತಗಟ್ಟೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಬದಲಾವಣೆಗಳಿದ್ದಲ್ಲಿ ಅರ್ಜಿ ಸಲ್ಲಿಸ ಬಹುದಾಗಿದೆ. ಯುವ ಮತದಾರರ ನೋಂದಣಿಗಾಗಿಯೇ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ವಿಶೇಷ ಅಭಿಯಾನ ಕೈಗೊಳ್ಳಲಾಗುತ್ತಿದೆ.
    18 ವರ್ಷ ತುಂಬಿದ ಎಲ್ಲರೂ ಹೆಸರು ನೋಂದಾಯಿಸ ಬೇಕು. ಇದಕ್ಕಾಗಿ ಆಯಾ ಕಾಲೇಜಲ್ಲಿ ಅಗತ್ಯ ದಾಖಲೆಗಳೊಂದಿಗೆ ನ ಮೂ ನೆ-6ನ್ನು ಭರ್ತಿ ಮಾಡಿ ಸಲ್ಲಿಸಬೇಕು. ಮತಗಟ್ಟೆಗಳಿಗೆ ಭೇಟಿ ನೀಡಿ, ಪಟ್ಟಿಯಲ್ಲಿ ಹೆಸರು ಇದೆಯೆ,ಇಲ್ಲವೇ ಎಂಬದನ್ನೂ ಪರಿಶೀಲಿಸ ಬೇಕು. ಹೆಸರು ಖಚಿತಪಡಿಸಿಕೊಂಡರೆ ಚುನಾವಣೆ ಸಮಯದಲ್ಲಿ ಗೊಂದಲಗಳಿರುವುದಿಲ್ಲ.
    ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಮತದಾರರ ಮನೆಗೆ ಅಂಚೆ ಮೂಲಕ ತಲುಪಿಸಲಾಗುವುದು. ಎಪಿಕ್ ಕಾ ರ್ಡ್‌ನ್ನು ಬೇರೆ ಎಲ್ಲೂ ಕೊಡುವುದಿಲ್ಲ. ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ ಸಂಖ್ಯೆ 1950ಕ್ಕೆ ಕರೆ ಮಾಡಬಹುದೆಂದರು. ಎಸಿ ಎಂ.ಕಾರ್ತಿಕ್, ತಹಸೀಲ್ದಾರ್ ಎಂ.ನಾಗವೇಣಿ, ತಾ.ಪಂ.ಇಒ ಹನುಮಂತಪ್ಪ,ಪ್ರಚಾರ‌್ಯ ಬಿ.ಟಿ.ತಿಪ್ಪೇರುದ್ರಸ್ವಾಮಿ ಮತ್ತಿತರರು ಇದ್ದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts