More

    ಮತ್ತೆ 50 ಕರೊನಾ ಶಂಕಿತರು ಪತ್ತೆ

    ಧಾರವಾಡ: ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗಿನ 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಮತ್ತೆ 50 ಶಂಕಿತ ಕರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಎರಡು ದಿನದಿಂದ ಶಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿರುವುದು ಆತಂಕ ಉಂಟುಮಾಡಿದೆ.

    ಶಂಕಿತ ಸೋಂಕಿತರ ಗಂಟಲ ದ್ರವದ ಮಾದರಿಯನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸೋಮವಾರ 183 ಇದ್ದ ಶಂಕಿತರ ಸಂಖ್ಯೆ ಮಂಗಳವಾರ 233ಕ್ಕೆ ಏರಿಕೆಯಾಗಿದೆ. ಜತೆಗೆ, ನಿಗಾ ವಹಿಸಲಾಗಿರುವವರ ಸಂಖ್ಯೆ 688ರಿಂದ 738ಕ್ಕೆ ಏರಿಕೆಯಾಗಿದೆ.

    ಈವರೆಗೆ ಜಿಲ್ಲೆಯಲ್ಲಿ ಒಟ್ಟು 233 ಶಂಕಿತ ವ್ಯಕ್ತಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 112 ಜನರ ವರದಿ ನೆಗೆಟಿವ್ ಬಂದಿವೆ. ಒಬ್ಬ ವ್ಯಕ್ತಿಗೆ ಮಾತ್ರ ಕರೊನಾ ದೃಢಪಟ್ಟಿತ್ತು. ಆತ ಸಹ ಗುಣಮುಖನಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ. ಇನ್ನೂ 121 ವರದಿ ಬರಬೇಕಿದೆ.

    ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯು ವಿದೇಶದಿಂದ ಆಗಮಿಸಿರುವ ಹಾಗೂ ಅವರ ಸಂಪರ್ಕಕ್ಕೆ ಒಳಗಾದ 738 ಜನರ ಮೇಲೆ ನಿಗಾ ಇಟ್ಟಿದೆ. ಈ ಪೈಕಿ 118 ಜನರು ಮನೆಯಲ್ಲೇ ಪ್ರತ್ಯೇಕವಾಗಿ (14 ದಿನ) ವಾಸವಾಗಿದ್ದಾರೆ. ಆಸ್ಪತ್ರೆಯ ಪ್ರತ್ಯೇಕ ವಾರ್ಡ್​ಗಳಲ್ಲಿ 3 ಜನ ದಾಖಲಾಗಿದ್ದಾರೆ. 340 ಜನರು 14 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದರೆ, 277 ಜನರು 28 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts