More

    ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ರಚನೆ ಖಚಿತ

    ದೊಡ್ಡಬಳ್ಳಾಪುರ
    ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವುದು ಖಚಿತ ಎಂದು ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನಿರ್ದೇಶಕ ಆನಂದ ಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.
    ತಾಲೂಕಿನ ವಿವಿಧೆಡೆ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಪ್ರಧಾನಿ ಮೋದಿ, ನಾಯಕರಾದ್ ಅಮಿತ್ ಷಾ ಮತ್ತು ಜೆ.ಪಿ.ನಡ್ಡಾ ಅವರ ಪ್ರಚಾರದ ನಂತರ ಕಾಂಗ್ರೆಸ್‌ನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಯ ಆಸೆ ಕೈಬಿಟ್ಟಿದ್ದಾರೆ ಎಂದು ಲೇವಡಿ ಮಾಡಿದರು.
    ಬಿಜೆಪಿ ಅಭ್ಯರ್ಥಿಯ ಗೆಲುವು ಪ್ರತಿಯೊಬ್ಬ ಕಾರ್ಯಕರ್ತರ ಗೆಲುವಾಗಿರುತ್ತದೆ. ರಾಜ್ಯದ ಚುನಾವಣೆ ದೇಶದ ರಾಜಕೀಯ ಭವಿಷ್ಯ ನಿರ್ಧರಿಸುತ್ತದೆ. ಹಾಗಾಗಿ ಪ್ರತಿ ಕಾರ್ಯಕರ್ತರು ಸಂಘಟಿತ ಪ್ರಯತ್ನ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿ ಧೀರಜ್ ಮುನಿರಾಜು ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಬಿಜೆಪಿಗೆ ಉತ್ತಮ ವಾತಾವರಣವಿದೆ. ಪ್ರತಿ ಕಾರ್ಯಕರ್ತರು ತಮ್ಮ ಮನೆಯ ಮಗನನ್ನು ಗೆಲ್ಲಿಸುವಂತೆ ಕಾರ್ಯನಿರ್ವಹಿಸಬೇಕು ಎಂದರು.
    ಅಭ್ಯರ್ಥಿ ಧೀರಜ್ ಮುನಿರಾಜು ಮಾತನಾಡಿ, ತಾಲೂಕಿನಲ್ಲಿ ಈವರೆಗೆ ಉತ್ತಮ ಶಿಕ್ಷಣ ವ್ಯವಸ್ಥೆ ಮರೀಚಿಕೆಯಾಗಿದೆ. ಬೆಂಗಳೂರಿಗೆ ಕೂಗಳತೆ ದೂರದಲ್ಲಿದ್ದರೂ ನರ್ಸಿಂಗ್ ಕಾಲೇಜು, ಕಾನೂನು ವಿದ್ಯಾಲಯ, ಡಿಪ್ಲೊಮಾ, ಐಟಿಐ, ಮೆಡಿಕಲ್ ಕಾಲೇಜು, ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೆಂಟರ್ ಹೀಗೆ ಶಿಕ್ಷಣದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಮುಂದಿನ ದಿನಗಳಲ್ಲಿ ಶಿಕ್ಷಣ, ಆರೋಗ್ಯ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಈವರೆಗೆ ತಾಲೂಕಿನ ಹಲವು ಗ್ರಾಮಗಳಿಗೆ ರಸ್ತೆ, ಬಸ್ ಸಂಪರ್ಕ ಇಲ್ಲದೆ ಇರುವುದು ಶೋಚನೀಯ. ಹಲವು ಕುಗ್ರಾಮಗಳಲ್ಲಿ ಗುಡಿಸಲಿನಲ್ಲೆ ವಾಸ ಮಾಡುವಂತಹ ದುಸ್ಥಿತಿ ಇದೆ. ಇಂತಹ ಮೂಲ ಸೌಕರ್ಯಗಳ ವ್ಯವಸ್ಥೆಯನ್ನು ತಾಲೂಕಿನ ಪ್ರತಿ ಗ್ರಾಮದಲ್ಲಿ ಸರಿಪಡಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
    ಹೊಸ ಮುಖಕ್ಕೆ ಅವಕಾಶ ಖಚಿತ: ಮೂರು ಬಾರಿಯೂ ಸೋಲಿನ ರುಚಿ ನೋಡಿರುವ ಜೆಡಿಎಸ್ ಈ ಬಾರಿಯೂ ಸೋಲಿನ ಹಾದಿ ಹಿಡಿಯಲಿದೆ. 10 ವರ್ಷದಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ವಿರುದ್ಧ ತಾಲೂಕಿನಾದ್ಯಂತ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಶಾಸಕರ ವೈಯಕ್ತಿಕ ಅಭಿವೃದ್ಧಿ ಬಿಟ್ಟರೆ, ತಾಲೂಕಿನ ಅಭಿವೃದ್ಧಿಗೆ ಕೊಡುಗೆ ಶೂನ್ಯ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಉತ್ಸಾಹದ ಚಿಲುಮೆ, ಕಾಲಕ್ಕೆ ತಕ್ಕಂತೆ ವೇಗಕ್ಕೆ ಹೊಂದಿಕೊಂಡು, ಅಭಿವೃದ್ಧಿಯ ನೀಲಿನಕ್ಷೆ ತಯಾರಿಸಿರುವ ಧೀರಜ್ ಮುನಿರಾಜುಗೆ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂದು ಎಂದು ಆನಂದ್ ಮೂರ್ತಿ ಭವಿಷ್ಯ ನುಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts