More

    ಮದುವೆ ಮಂಟಪ, ಗೃಹಪ್ರವೇಶದಲ್ಲೂ ಮತಜಾಗೃತಿ

    ಜಿಲ್ಲಾ ಸ್ವೀಪ್ ತಂಡದ ಕಾರ್ಯಜಿಲ್ಲೆಯಲ್ಲಿ ಜನರ ಮೆಚ್ಚುಗೆ

    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯಾ ತಾಲೂಕು ಸ್ವೀಪ್ ಸಮಿತಿ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳು ಮತದಾನ ಜಾಗೃತಿಗೆ ಬೆವರು ಹರಿಸುತ್ತಿದ್ದು, ಸಾಕಷ್ಟು ಯಶಸ್ಸು ಕಂಡಿದ್ದಾರೆ. ಮದುವೆ ಮಂಟಪಗಳಲ್ಲಿ, ಗೃಹಪ್ರವೇಶ ಸೇರಿ ಇನ್ನಿತರ ಶುಭ ಕಾರ್ಯಗಳು ನಡೆಯುವ ಸ್ಥಳಗಳಿಗೆ ತೆರಳಿ ಮತದಾನ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ಗಮನ ಸೆಳೆಯುತ್ತಿದ್ದಾರೆ.
    ಮದುವೆ ನಡೆಯುತ್ತಿರುವ ಕಲ್ಯಾಣ ಮಂಟಪಗಳಿಗೆ ತೆರಳುವ ಅಧಿಕಾರಿಗಳು ವಧುವರರಿಗೆ ಗ್‌ಟಿ ರೂಪದಲ್ಲಿ ಮತದಾನ ಜಾಗೃತಿ ಮೂಡಿಸುವ ಕರಪತ್ರ ವಿತರಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಮದುವೆಯಲ್ಲಿ ಸೇರಿರುವ ಸಾವಿರಾರು ಜನರಿಂದ ತಪ್ಪದೆ ಮತದಾನ ಮಾಡುತ್ತೇವೆ ಎಂಬ ಪ್ರತಿಜ್ಞಾ ವಿಧಿ ಸ್ವೀಕಾರದಂತಹ ಕಾರ್ಯಕ್ರಮಗಳು ಈ ಬಾರಿ ವಿಶೇಷವಾಗಿ ಗಮನ ಸೆಳೆಯುತ್ತಿವೆ. ಮತದಾನವನ್ನು ಹಬ್ಬದಂತೆ ಆಚರಿಸಲು ಮುಂದಾಗಿರುವ ಸ್ವೀಪ್ ಸಮಿತಿ ತಂಡ ಹೊಸ ಹುರುಪಿನೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿದೆ.
    ಆಮಿಷಗಳಿಗೆ ಒಳಗಾಗಬೇಡಿ: ಮುಖ್ಯವಾಗಿ ಆಮಿಷಗಳಿಗೆ ಒಳಗಾಗಿ ಮತವನ್ನು ಮಾರಿಕೊಳ್ಳಬೇಡಿ ಎಂದು ಒತ್ತು ಕೊಟ್ಟು ಜಾಗೃತಿ ಮೂಡಿಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಮತದಾರರಿಗಿದೆ. ಪ್ರತಿಯೊಬ್ಬರೂ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಯಶಸ್ವಿಗೊಳಿಸಬೇಕು ಎಂಬ ೋಷವಾಕ್ಯದೊಂದಿಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಒಂದು ಕಡೆ ವಿವಿಧ ರಾಜಕೀಯ ಪಕ್ಷದ ಅಭ್ಯರ್ಥಿಗಳು ಮತಪ್ರಚಾರದಲ್ಲಿ ಅಬ್ಬರಿಸುತ್ತಿದ್ದರೆ ಇತ್ತ ಕಡೆ ಸ್ವೀಪ್ ಸಮಿತಿ ಸದಸ್ಯರು ಮತದಾನ ಜಾಗೃತಿ ಬಗ್ಗೆ ಹೆಚ್ಚಿನ ಮಟ್ಟದಲ್ಲಿ ಪ್ರಚಾರದಲ್ಲಿ ನಿರತವಾಗಿರುವುದು ಕಂಡುಬರುತ್ತಿದೆ. ಅಪಾರ್ಟ್‌ಮೆಂಟ್‌ಗಳು, ಆಸ್ಪತ್ರೆ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ನಿರಂತರವಾಗಿ ಜಾಗೃತಿ ಮೂಡಿಸುತ್ತಿರುವ ಸ್ಪೀಪ್ ಸಮಿತಿ ಈ ಬಾರಿ ಹೆಚ್ಚು ಮತದಾನ ನಡೆಸುವ ಭರವಸೆ ವ್ಯಕ್ತಪಡಿಸಿದೆ.

    ಈ ಬಾರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ನಡೆಸಬೇಕೆಂಬುದು ನನ್ನ ಆಶಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಪೂರ್ಣ ಮತದಾನವಾದರೆ ಇದರ ಆಶಯಕ್ಕೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಲಾಗುತ್ತಿದೆ. ಸ್ವೀಪ್ ಸಮಿತಿ ಇದರಲ್ಲಿ ಸಾಕಷ್ಟು ಯಶಸ್ವಿಯಾಗಿದೆ.

    ಆರ್.ಲತಾ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ

    ಮತದಾನ ಜಾಗೃತಿ ಮೂಡಿಸುವ ಸಲುವಾಗಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಮದುವೆ ನಡೆಯುವ ಸ್ಥಳಗಳು ಗೃಹಪ್ರವೇಶ ಮತ್ತಿತರ ಶುಭಸಮಾರಂಭದಂಥ ಕಾರ್ಯಕ್ರಮಗಳ ಸ್ಥಳಗಳಿಗೆ ತೆರಳಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಜನರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.
    ಪುಷ್ಪಾ, ಸ್ವೀಪ್ ಸಮಿತಿ ಸಂಚಾಲಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts