More

    ಮದ್ದೂರಿನ ವಿವಿಧೆಡೆ ಧಾರಾಕಾರ ಮಳೆ

    ಮದ್ದೂರು: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಗುರುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಹಾನಿಯಾಗಿದೆ.
    ಬಿರುಗಾಳಿ ಸಹಿತ ಮಳೆಯಿಂದಾಗಿ ವಿವಿಧೆಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ತಾಲೂಕಿನ ಮಾಲಗಾರನಹಳ್ಳಿ, ಕೆ.ಕೋಡಿಹಳ್ಳಿ ಸೇರಿದಂತೆ ವಿವಿಧ ಮಳೆಗೆ ಕೆಲ ಮನೆಗಳ ಛಾವಣಿ ಹಾರಿ ಹೋಗಿದ್ದು, ವಸ್ತುಗಳು ಹಾನಿಗೊಂಡಿವೆ.
    ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಬೇಡ್ಕರ್ ಭವನದ ಸಮೀಪ ಬೃಹತ್ ಮರ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಸರ್ವೀಸ್ ರಸ್ತೆಗೆ ಮರ ಉರುಳಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮಳೆ ನೀರು ಸರ್ವೀಸ್ ರಸ್ತೆಗೆ ನುಗ್ಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.
    ಪಟ್ಟಣ ವ್ಯಾಪ್ತಿಯ ವಿವಿಧೆಡೆ ಅಳವಡಿಸಲಾಗಿದ್ದ ಜಾಹೀರಾತು ಫಲಕಗಳು ಬಿರುಗಾಳಿಗೆ ಸಿಲುಕಿ ತೂರಿ ಹೋಗಿವೆ. ಕೆಲವು ಬಡಾವಣೆಗಳಲ್ಲಿ ಮಳೆ ನೀರಿನಿಂದಾಗಿ ಒಳಚರಂಡಿ ನೀರು ಉಕ್ಕಿ ಹರಿದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಿದ್ಯುತ್ ಕಂಬಗಳು ನೆಲಕ್ಕುರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸೆಸ್ಕ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ದುರಸ್ತಿಗೆ ಕ್ರಮ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts