More

    ಮದ್ಯಪಾನ ನಿಷೇಧ ಕಾಯ್ದೆ ಜಾರಿಗೆ ಮುಂದಾಗಲಿ

    ಹಾಸನ: ಕುಟುಂಬದಲ್ಲಿ ನೆಮ್ಮದಿ ನೆಲೆಸಬೇಕೆಂದರೆ ಮದ್ಯಪಾನದಿಂದ ದೂರ ಇರಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.


    ಚನ್ನರಾಯಪಟ್ಟಣ ನವೋದಯ ವಿದ್ಯಾಸಂಸ್ಥೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಗಾಂಧಿ ಸ್ಮರಣೆ ಹಾಗೂ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ಕುರಿತು ಆಯೋಜಿಸಿದ್ದ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಕುಡಿತದಿಂದ ಆರೋಗ್ಯ ಕ್ಷೀಣಿಸುವುದರ ಜತೆಗೆ ಬದುಕು ಬೀದಿಗೆ ಬರಲಿದೆ. ನೆಮ್ಮದಿಯನ್ನು ತಾವೇ ತಂದುಕೊಳ್ಳಬೇಕಾಗುತ್ತದೆ. ಸಕಾರಾತ್ಮಕ ಚಿಂತನೆ ಹಾಗೂ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ಸಲಹೆ ನೀಡಿದರು.


    ಗುಜರಾತ್ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಪೂರ್ಣ ಪಾನನಿಷೇಧ ಕಾಯ್ದೆ ಜಾರಿಗೆ ತರಬೇಕು. ಅದರಲ್ಲೂ ಇಡೀ ರಾಷ್ಟ್ರದಲ್ಲಿ ಪಾನ ನಿಷೇಧ ಜಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.


    ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಘಟಕದ ಉಪಾಧ್ಯಕ್ಷ ಡಾ.ಕೆ.ನಾಗೇಶ್ ಮಾತನಾಡಿ, ಮದ್ಯಪಾನ ಮತ್ತು ಇನ್ನಿತರೆ ದುಶ್ಚಟಗಳಿಂದ ದೇಶದ ಪ್ರಗತಿಗೆ ಹಿನ್ನಡೆಯಾಗುತ್ತದೆ. ಪಾನ ನಿಷೇಧ ಜಾರಿಗೆ ತರುವುದು ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಮೊದಲು ಆ ಕೆಲಸವಾಗಬೇಕು ಎಂದರು.


    ಇದಕ್ಕೂ ಮೊದಲು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಜಯರಾಂ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಂ ನೆಲ್ಲತಾಯ, ನಿರ್ದೇಶಕ ಮಹಾಬಲ ಕುಲಾಲ್, ಜನ ಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಕೆ.ಎಸ್.ರಾಜೇಶ್, ಪುರಸಭಾ ಅಧ್ಯಕ್ಷೆ ರಾಧಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಎನ್.ಬನಶಂಕರಿ, ನವೋದಯ ವಿದ್ಯಾಸಂಘದ ಅಧ್ಯಕ್ಷ ಸಿ.ಎಸ್.ಆದಿಶೇಷಕುಮಾರ್, ಪ್ರಾಂಶುಪಾಲ ಬಿ.ಚನ್ನಯ್ಯ ಇದ್ದರು.


    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts