More

    ಮಧುಗಿರಿ ಕಂದಾಯ ಜಿಲ್ಲೆಗೆ ಸಹಕಾರ ಅಗತ್ಯ ; ಶಾಸಕ ವೀರಭಧ್ರಯ್ಯ

    ಮಧುಗಿರಿ: ಮಧುಗಿರಿ ಶೈಕ್ಷಣಿಕ ಜಿಲ್ಲೆಯಾಗಿದ್ದು, ಕಂದಾಯ ಜಿಲ್ಲೆಗೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಂ.ವಿ.ವೀರಭಧ್ರಯ್ಯ ಹೇಳಿದರು.

    ಪಟ್ಟಣದಲ್ಲಿ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರ ಸಂಘದಿಂದ ನಿರ್ಮಿಸಿರುವ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸದನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.  ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರು ರಾಜ್ಯ ಮಟ್ಟದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದಾರೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಇಲ್ಲಿ ಚರ್ಚೆಗಳು, ಮಾರ್ಗೋಪಾಯಗಳಾಗುವ ಪ್ರಯೋಗಾಲಯವಾಗಬೇಕು ಎಂದರು. ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ವರ್ಷಕ್ಕೊಮ್ಮೆ ಶಿಕ್ಷಕರ ದೊಡ್ಡ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ನೆರೆರಾಜ್ಯಗಳಲ್ಲಿ ಕರೊನಾದಿಂದಾಗಿ ಸರ್ಕಾರಿ ನೌಕರರ ವೇತನದಲ್ಲಿ ಶೇ.30 ತಡೆಹಿಡಿದಿದ್ದು, ರಾಜ್ಯದಲ್ಲಿ ವೇತನದಲ್ಲಿ ಕಡಿತ ಮಾಡಿಲ್ಲ ಎಂದರು.

    ಎಂಎಲ್‌ಸಿ ಚೌಡರೆಡ್ಡಿ ತೂಪಲ್ಲಿ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಚೌಡಪ್ಪ, ಜಿಪಂ ಸದಸ್ಯ ಕೊಂಡವಾಡಿ ತಿಮ್ಮಯ್ಯ, ಪ್ರೆಸಿಡೆನ್ಸಿ ಶಾಲೆಯ ಚಿದಾನಂದಗೌಡ, ಪುರಸಭೆ ಸದಸ್ಯರಾದ ಎಂ.ಆರ್.ಜಗನ್ನಾಥ್, ಎಂ.ಎಲ್.ಗಂಗರಾಜು, ಎಂ.ಎಸ್.ಚಂದ್ರಶೇಖರ್‌ಬಾಬು, ಕೆ.ನಾರಾಯಣ್, ತುಂಗೋಟಿ ರಾಮಣ್ಣ, ಬಿಇಒ ರಂಗಪ್ಪ, ಡಯಟ್ ಪ್ರಾಂಶುಪಾಲ ವೈ.ಎನ್.ರಾಮಕೃಷ್ಣಯ್ಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ವೆಂಕಟರಾಮು, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶಯ್ಯ ಮತ್ತಿತರರಿದ್ದರು.

    ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ಬೇಡ: ರಾಜ್ಯದ 8.60 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಇತ್ತೀಚೆಗೆ ಬೆಂಗಳೂರಿನ ಜಯನಗರದ ಪರೀಕ್ಷಾಕೇಂದ್ರದಲ್ಲಿ ವಿದ್ಯಾರ್ಥಿಗೆ ಕರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 22 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಆದ್ದರಿಂದ ಪರೀಕ್ಷೆ ರದ್ದುಗೊಳಿಸುವಂತೆ ಪತ್ರಮುಖೇನ ಒತ್ತಾಯಿಸಿದ್ದು, ಸುಪ್ರೀಂಕೋರ್ಟ್ ಮತ್ತು ಸರ್ಕಾರದ ಆದೇಶದಂತೆ ಪರೀಕ್ಷೆ ನಡೆಸುವ ನಿರ್ಧಾರ ವಿರೋಧಿಸುವಂತಿಲ್ಲ. ಎಸ್‌ಎಸ್‌ಎಲ್ಸಿ ಅಂಕಪಟ್ಟಿ ಈಗ ಹುಟ್ಟಿದ ದಿನಾಂಕಕ್ಕೆ ಸೀಮಿತವಾಗಿದೆ. ಉದ್ಯೋಗಕ್ಕೆ ಪಿಯುಸಿ ಮಾನದಂಡವಾಗಲಿರುವ ಕಾರಣ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ಬೇಡ ಎಂಬುದು ನನ್ನ ಅಭಿಪ್ರಾಯ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts