More

    ಮಧ್ಯವರ್ತಿಗಳಿಂದ ರೈತರ ಉಳಿಸಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ

    ಮಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಾರ್ಯಕ್ರಮ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ಜರುಗಿತು.

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಧ್ಯವರ್ತಿ ಗಳಿಂದ ರೈತರನ್ನು ಕಾಪಾಡುವ ಉದ್ದೇಶದಿಂದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದ ಕೇಂದ್ರದ ತೀರ್ಮಾನವನ್ನು ಸ್ವಾಗತಿಸುವುದಾಗಿ ಹೇಳಿದರು.

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ವಾಜಪೇಯಿ ಅವರು ಪ್ರಥಮ ಬಾರಿಗೆ ದೇಶದಲ್ಲಿ ಕಿಸಾನ್ ಕಾರ್ಡ್ ಪರಿಚಯಿಸಿದ್ದರು ಎಂದರು.

    ಪ್ರಧಾನಿ ಮೋದಿಯವರು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರು ಸ್ವಾವಲಂಬಿ ಯಾಗಿ ಬದುಕುವ ಅವಕಾಶ ಒದಗಿಸಿದ್ದಾರೆ ಎಂದು ಹೇಳಿದರು.

    ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡುಬಿದರೆ, ಶಾಸಕರಾದ ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್, ಪ್ರತಾಪಸಿಂಹ ನಾಯಕ್, ಮೇಯರ್ ದಿವಾಕರ ಪಾಂಡೇಶ್ವರ್ ಮುಂತಾದವರು ಉಪಸ್ಥಿತರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts