More

    ಮಧ್ಯಾಹ್ನ 1ಕ್ಕೆ ಅಂಗಡಿ ಬಂದ್!

    ಗಜೇಂದ್ರಗಡ: ಲಾಕ್​ಡೌನ್ ಸಡಿಲಿಕೆಯಿಂದ ಕೋವಿಡ್-19 ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಪಟ್ಟಣದಲ್ಲಿ ವ್ಯಾಪಾರಸ್ಥರು ಸೋಮವಾರ ಮಧ್ಯಾಹ್ನ 1 ಗಂಟೆಗೆ ಅಂಗಡಿ- ಮುಂಗಟ್ಟು ಗಳನ್ನು ಸ್ವಯಂಪ್ರೇರಿತರಾಗಿ ಬಂದ್ ಮಾಡಿದರು. ಲಾಕ್​ಡೌನ್ ಸಡಿಲಿಕೆ ಬಳಿಕ ಜಿಲ್ಲಾಡಳಿತ ವ್ಯಾಪಾರದ ಸಮಯವನ್ನು ಬೆಳಗ್ಗೆ 7ರಿಂದ ಸಂಜೆ 7 ರವರೆಗೆ ವಿಸ್ತರಿಸಿದ್ದರಿಂದ ಜನರ ಓಡಾಟ ಹೆಚ್ಚಾಗಿದೆ. ಅಲ್ಲದೆ, ರಾಜ್ಯದಲ್ಲಿ ಕರೊನಾ ತೀವ್ರವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟಲು ಪ್ರತಿದಿನ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ತೆರೆಯು ತ್ತೇವೆ. ನಂತರ ಬಂದ್ ಮಾಡುತ್ತೇವೆ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ.

    ಗಜೇಂದ್ರಗಡ ತಾಲೂಕು ಬಾಗಕೋಟೆ, ಕೊಪ್ಪಳ ಜಿಲ್ಲೆಗಳ ಗಡಿ ಹೊಂದಿದೆ. ಕರೊನಾ ಸೋಂಕು ಹರಡಬಾರದು ಎಂದು ಈ ನಿರ್ಣಯ ತೆಗೆದುಕೊಂಡಿದ್ದೇವೆ. ವ್ಯಾಪಾರದ ಸಮಯದಲ್ಲಿ ಮಾಸ್ಕ್ ಬಳಕೆ ಕಡ್ಡಾಯ, ಪರಸ್ಪರ ಅಂತರ ಕಾಯ್ದುಕೊಂಡು ವ್ಯಾಪಾರ-ವಹಿವಾಟು ನಡೆಸಲು ತೀರ್ವನಿಸಲಾಗಿದೆ.

    | ಎಂ.ಎಸ್. ಹಿರೇಮನಿ ಅಧ್ಯಕ್ಷ, ವಾಣಿಜ್ಯೋದ್ಯಮ ಸಂಸ್ಥೆ, ಗಜೇಂದ್ರಗಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts